ರೇಣುಕಾಸ್ವಾಮಿ ಕೊಲೆ: ಆರೋಪಿ ಪ್ರದೋಷ್ ಬೆಳಗಾವಿಯಿಂದ ಬೆಂಗ್ಳೂರು ಜೈಲಿಗೆ

By Kannadaprabha News  |  First Published Oct 10, 2024, 8:36 AM IST

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಸಿಗರೇಟ್ ಸೇದುತ್ತಾ ಕಾಫಿ ಕುಡಿಯುತ್ತಿದ್ದ ಚಿತ್ರ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಕರಣದ ಎಲ್ಲ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಿಸಲಾಗಿತ್ತು. ಅದರಂತೆ ಪ್ರದೋಶ್‌ನನ್ನು ಬೆಳಗಾವಿ ಜೈಲಿಗೆ ಕಳುಹಿಸಲಾಗಿತ್ತು. 

ಬೆಂಗಳೂರು(ಅ.10):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಎಸ್. ರಾವ್ ಅವರನ್ನು ಮತ್ತೆ ಬೆಳಗಾವಿ ಜೈಲಿನಿಂದ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ. 

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಸಿಗರೇಟ್ ಸೇದುತ್ತಾ ಕಾಫಿ ಕುಡಿಯುತ್ತಿದ್ದ ಚಿತ್ರ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಕರಣದ ಎಲ್ಲ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಿಸಲಾಗಿತ್ತು. ಅದರಂತೆ ಪ್ರದೋಶ್‌ನನ್ನು ಬೆಳಗಾವಿ ಜೈಲಿಗೆ ಕಳುಹಿಸಲಾಗಿತ್ತು. 

Tap to resize

Latest Videos

ರೇಣುಕಾಸ್ವಾಮಿ ಹತ್ಯೆ ಅರೇಬಿಯನ್ ನೈಟ್ಸ್‌ ಕಥೆಯಲ್ಲೂ ಈ ರೀತಿ ಹಿಂಸೆ ಕೊಟ್ಟಿಲ್ಲ!

ಈ ಹಿನ್ನೆಲೆ ತಮ್ಮನ್ನು ಮತ್ತೆ ಬೆಂಗಳೂರಿನ ಜೈಲಿಗೆ ಸ್ಥಳಾಂತರಿಸಲು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಪ್ರದೋಶ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ವಿಚಾರಣಾಧೀನ ಕೈದಿ ಜೈಲನ್ನು ಆಯ್ಕೆ ಮಾಡಿಕೊಳ್ಳುವಂತಿಲ್ಲ ಎಂದು ತಿಳಿಸಿದರು.

click me!