ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ನಿಂದ ಮತ್ತೊಂದು ಬೇಡಿಕೆ, ಕೋರ್ಟ್ ಗೆ ಅರ್ಜಿ ಸಲ್ಲಿಕೆ

Published : Feb 23, 2026, 12:44 PM IST
Darshan Thoogudeepa

ಸಾರಾಂಶ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಪ್ರಕರಣದ ತ್ವರಿತ ವಿಚಾರಣೆಗಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರತಿದಿನ ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದ್ದು, ಈ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಪ್ರಾಸಿಕ್ಯೂಷನ್ ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆಯಿದೆ.

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಡೇ ಟು ಡೇ ವಿಚಾರಣೆ ನಡೆಸಬೇಕೆಂದು ಮನವಿ ಸಲ್ಲಿಸಿದ್ದು, ಇದರ ನಡುವೆ ಟ್ರಯಲ್ ವಿಚಾರಣೆಗೆ ಕೂಡ ಕೋರ್ಟ್ ಮುಂದೆ ಹಾಜರಾಗಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ಸಾಕ್ಷ್ಯಗಳ ಪರಿಶೀಲನೆ ಹಾಗೂ ವಿಚಾರಣೆ ಹಿನ್ನೆಲೆ ಇಂದು ಟ್ರಯಲ್‌ಗೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಗಳನ್ನು ವಿಚಾರಣೆ ನಡೆಯಲಿದ್ದು, ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ನಟ ದರ್ಶನ್ ಇಂದು ವಿಡಿಯೋ ಮೂಲಕ ವಿಚಾರಣೆಗೆ ಹಾಜರಾಗಲಿದ್ದಾರೆ.

ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ಕೋರ್ಟ್‌ಗೆ ಅರ್ಜಿ

ಇದರ ನಡುವೆಯೇ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಡೇ ಟು ಡೇ (ಪ್ರತಿದಿನ) ಆಧಾರದ ಮೇಲೆ ವಿಚಾರಣೆ ನಡೆಸಬೇಕು ಎಂದು ದರ್ಶನ್ ಪರ ವಕೀಲರು ಮನವಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಕೂಡ ಇಂದು ಸೆಷನ್ಸ್ ಕೋರ್ಟ್ ನಲ್ಲಿ ನಡೆಯಲಿದೆ.

ಆದರೆ ದರ್ಶನ್ ಸಲ್ಲಿಸಿರುವ ಅರ್ಜಿಗೆ ಪ್ರಾಸಿಕ್ಯೂಷನ್ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ. ಪ್ರತಿದಿನ ವಿಚಾರಣೆ ನಡೆಸುವುದರಿಂದ ಸಾಕ್ಷ್ಯಗಳ ಪರಿಶೀಲನೆ ಹಾಗೂ ಕಾನೂನು ಪ್ರಕ್ರಿಯೆಗೆ ತೊಂದರೆ ಉಂಟಾಗಬಹುದು ಎಂಬ ಕಾರಣವನ್ನು ಮುಂದಿಟ್ಟು ಆಕ್ಷೇಪಣೆ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆ ದರ್ಶನ್ ಅರ್ಜಿಯ ಕುರಿತು ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಟ್ರಯಲ್‌ಗೆ ಇಂದು ಕೋರ್ಟ್‌ಗೆ ಹಾಜರು

ಇನ್ನು ರೇಣುಕಾಸ್ವಾಮಿ ಪ್ರಕರಣದ ಟ್ರಯಲ್‌ಗೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳೂ ಇಂದು ಕೋರ್ಟ್‌ಗೆ ಹಾಜರಾಗಲಿದ್ದಾರೆ. ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು ಏಳು ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಿಂದ ಕೋರ್ಟ್‌ಗೆ ಹಾಜರಾಗಲಿದ್ದು, ಭದ್ರತಾ ಕಾರಣಗಳಿಂದ ದರ್ಶನ್ ಮತ್ತು ಪವಿತ್ರಾಗೌಡ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ಎದುರು ಹಾಜರಾಗಲಿದ್ದಾರೆ. ಉಳಿದ ಆರೋಪಿಗಳು ಖುದ್ದಾಗಿ ಕೋರ್ಟ್‌ಗೆ ಹಾಜರಾಗುವ ನಿರೀಕ್ಷೆಯಿದೆ. ಇನ್ನು ತ್ವರಿತ ವಿಚಾರಣೆಗೆ ಅನುಮತಿ ಸಿಗುತ್ತದೆಯೇ ಎಂಬ ಕುತೂಹಲ ಹೆಚ್ಚಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Bengaluru: ನಶೆ, ಮಾದಕ ಮಾತ್ರೆ ನೀಡಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇ*ಪ್
ಲಿವ್‌-ಇನ್‌ ಗೆಳತಿ ಗುಪ್ತಾಂಗಕ್ಕೆ ಸ್ಯಾನಿಟೈಸರ್‌ ಸುರಿದು ಬೆಂಕಿ