
ಹಾಸನ (ಫೆ.1): ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಪ್ರದೀಪ್ (30), ಗುರು (25) ಸ್ಥಳದಲ್ಲೇ ಸಾವಿಗೀಡಾದವರು. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಟಿಂಬರ್ ತುಂಬಿದ್ದ ಲಾರಿ ಟೈರ್ ಪಂಕ್ಚರ್ ಆಗಿ ರಸ್ತೆ ಮಧ್ಯೆ ನಿಂತಿತ್ತು. ಮುಂಜಾನೆ ವಾತಾವರಣದಲ್ಲಿ ಸಂಪೂರ್ಣವಾಗಿ ಮಂಜು ಆವರಿಸಿದ್ದ ಪರಿಣಾಮ ರಸ್ತೆಯಲ್ಲಿ ಸಾಗುವವರಿಗೆ ಮುಂದಿನ ವಾಹನಗಳು ಕಾಣದಂತಹ ಪರಿಸ್ಥಿತಿ ಇತ್ತು.
ಹೀಗಾಗಿ ಕಾರಿನಲ್ಲಿದ್ದವರಿಗೆ ಲಾರಿ ನಿಂತಿದ್ದುದು ಗೊತ್ತಾಗಿಲ್ಲ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲಿ ಉರುಳಿಬಿದ್ದಿದೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೋಟೆಲ್ ಒಂದರ ಪೂಜೆಗಾಗಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಅಪಘಾತಕ್ಕೆ ಪರಿಹಾರ ಕೊಡೋದು ವಿಮಾ ಕಂಪನಿಯದ್ದೇ ಹೊಣೆ: ಹೈಕೋರ್ಟ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ