ಪುತ್ತೂರು: ಚಲಿಸುತ್ತಿದ್ದ ರೈಲಿನಲ್ಲಿ ಲಕ್ಷಾಂತರ ರು. ಮೌಲ್ಯದ ನಗದು, ಚಿನ್ನಾಭರಣ ದರೋಡೆ

By Kannadaprabha News  |  First Published Aug 31, 2022, 8:22 AM IST

40 ಸಾವಿರ ನಗದು ಮತ್ತು ಚಿನ್ನಾಭರಣ ಸೇರಿ ಒಟ್ಟು 8 ಲಕ್ಷ ಮೌಲ್ಯದ ಸೊತ್ತು ದರೋಡೆ 


ಪುತ್ತೂರು(ಆ.31):  ಬೆಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಮಂಗಳವಾರ ನಸುಕಿನ ಜಾವ 2.30ರ ಸುಮಾರಿಗೆ ಮಹಿಳೆಯೊಬ್ಬರ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗ್‌ನ್ನು ದರೋಡೆ ಮಾಡಿ ದುಷ್ಕರ್ಮಿ ಪರಾರಿಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಸಮೀಪದ 1 ಕಿ.ಮೀ. ದೂರದ ಹಾರಾಡಿ, ಸಿಟಿಗುಡ್ಡೆ ಎಂಬಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ವಾಸವಿರುವ ಕಾರವಾರ ಮೂಲದ ಅಧ್ಯಾಪಕರಾಗಿರುವ ರಮೇಶ್‌ ಮತ್ತು ನಿರ್ಮಲಾ ದಂಪತಿ ದರೋಡೆ ಸಂತ್ರಸ್ತರು.

ಪ್ರಕರಣ ವಿವರ:

Tap to resize

Latest Videos

ಆ.29ರಂದು ರಾತ್ರಿ ಬೆಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ರೈಲು ಆ.30ರ ನಸುಕಿನ ಜಾವ 2.20ರ ಸುಮಾರಿಗೆ ಕಬಕ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ತಲುಪಿತ್ತು. 2.30ರ ಸುಮಾರಿಗೆ ರೈಲು ಕಾರವಾರಕ್ಕೆ ಹೊರಟ ವೇಳೆ ರೈಲು ಪುತ್ತೂರು ಹಾರಾಡಿ ಬ್ರಿಡ್ಜ್‌ ದಾಟಿ ಮುಂದೆ ಸಿಟಿ ಗುಡ್ಡೆ ತುಲುಪುತ್ತಿದ್ದಂತೆ ನಿರ್ಮಲಾ ಅವರು, ತಮ್ಮ ತಲೆಯ ಅಡಿಯಲ್ಲಿ ಇಟ್ಟಿದ್ದ ಚಿನ್ನಾಭರಣ ಮತ್ತು ನಗದು ಇರಿಸಿದ್ದ ವ್ಯಾನಿಟಿ ಬ್ಯಾಗ್‌ನ್ನು ಅಪರಿಚಿತ ವ್ಯಕ್ತಿ ಎಳೆಯುತ್ತಿರುವುದು ಗಮನಿಸಿ ಗಾಬರಿಯಿಂದ ಆ ವ್ಯಕ್ತಿಯನ್ನು ದೂಡಿದ್ದಾರೆ. ಈ ವೇಳೆ ವ್ಯಾನಿಟಿ ಬ್ಯಾಗ್‌ ಆತನಿಗೆ ಸಿಕ್ಕಿದ್ದು, ರೈಲು ಬೋಗಿಯಿಂದ ಹಾರಲು ಯತ್ನಿಸಿದಾಗ ಕೂಡಲೇ ಆತನನ್ನು ಹಿಡಿದ ಮಹಿಳೆಯು ತುರ್ತು ಸಂದರ್ಭ ರೈಲು ನಿಲ್ಲಿಸುವ ಚೈನ್‌ ಎಳೆದಿದ್ದಾರೆ.

ಮೊದಲ ಪತಿಯ ಹತ್ಯೆಗೆ 2ನೇ ಗಂಡನಿಂದ ಕಿಡ್ನಾಪ್ ಮಾಡಿಸಿದ ಪತ್ನಿ, ಕಾರು ಕೈಕೊಟ್ಟು ಲಾಕ್ !

ರೈಲಿನ ವೇಗ ನಿಧಾನವಾಗುತ್ತಿದ್ದಂತೆ ಅಪರಿಚಿತ ವ್ಯಕ್ತಿ ರೈಲಿನಿಂದ ಹಾರಿ ಪರಾರಿಯಾದ್ದಾನೆ. ಆಗ ಮಹಿಳೆಯೂ ಆಯ ತಪ್ಪಿ ರೈಲಿನಿಂದ ಹಳಿಯ ಮೇಲೆ ಬಿದ್ದಿದ್ದಾರೆ. ದರೋಡೆಕೋರ ಕತ್ತಲಿನಲ್ಲಿ ಪರಾರಿಯಾದ್ದಾನೆ. ಗಾಯಗೊಂಡ ಮಹಿಳೆ ನಿರ್ಮಲಾ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ್‌ ಮತ್ತು ನಿರ್ಮಲಾ ಅವರು ನೀಡಿದ ದೂರಿನಂತೆ 40 ಸಾವಿರ ನಗದು ಮತ್ತು ಚಿನ್ನಾಭರಣ ಸೇರಿ ಒಟ್ಟು 8 ಲಕ್ಷ ಮೌಲ್ಯದ ಸೊತ್ತು ದರೋಡೆ ಮಾಡಿರುವ ಕುರಿತು ಮಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
 

click me!