ಕಾರಿನ ಚಾಲಕ ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೆ ಪುಂಡರು ಕಾರು ಚಾಲಕನಿಗೆ ಚಾಕು ಇರಿದು ಗಂಭೀರ ಗಾಯಗೊಳಿಸಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೈರೇಹಳ್ಳಿಯಲ್ಲಿ ನಡೆದಿದೆ.
ತುಮಕೂರು (ನ.28) : ಕಾರಿನ ಚಾಲಕ ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೆ ಪುಂಡರು ಕಾರು ಚಾಲಕನಿಗೆ ಚಾಕು ಇರಿದು ಗಂಭೀರ ಗಾಯಗೊಳಿಸಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೈರೇಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರು ಮೂಲದ ಹೇಮಂತ್ ಕಾರು ಚಲಾಯಿಸಿಕೊಂಡು ಬೈರೇಹಳ್ಳಿ ಬಳಿ ಹೋಗುತ್ತಿದ್ದಾಗ ದಾರಿ ಗೊತ್ತಾಗಿಲ್ಲ. ಹೀಗಾಗಿ ಮುಂದೆ ಬೈಕ್‌ನಲ್ಲಿ ಹೋಗುತ್ತಿದ್ದ ಪುಂಡರಿಗೆ ಹಾರ್ನ್ ಮಾಡಿ ದಾರಿ ಕೇಳಿದ್ದಾನೆ. ಅಷ್ಟಕ್ಕೇ ಕುಪಿತಗೊಂಡಿರುವ ಪುಂಡರು ಕಾರು ಅಡ್ಡಗಟ್ಟಿದ್ದಾರೆ. ಚಾಲಕ ಹೇಮಂತ್ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿರುವ ಪುಂಡರು.
ಬೆಳಗಾವಿ: ಕೊಲೆ ಮಾಡಿ ಪ್ರಕರಣದ ದಿಕ್ಕು ತಪ್ಪಿಸಲೆತ್ನಿಸಿದ ಇಬ್ಬರು ಆರೋಪಿಗಳ ಸೆರೆ
ಏಕಾಏಕಿ ನಡೆದ ಪುಂಡರು ಚಾಕು ಇರಿದಿದ್ದರಿಂದ ಹೇಮಂತ್ ಗಂಭೀರ ಗಾಯಗೊಂಡು ಆಘಾತಕ್ಕೊಳಗಾಗಿದ್ದಾನೆ. ಪುಂಡರು ಹೇಮಂತ್‌ಗೆ ಚಾಕು ಇರಿದ ಬಳಿಕ ಬೈಕ್ ಹತ್ತಿ ಪರಾರಿಯಾಗಿದ್ದಾರೆ. ಘಟನೆ ಮಾಹಿತಿ ತಿಳಿದ ಕೊರಟಗೆರೆ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದ್ದು. ಆಯಾಕಟ್ಟಿನ ಜಾಗದಲ್ಲಿ ಅಳವಡಿಸಿರುವ ಸಿಸಿಟಿವಿ ಪರಿಶೀಲಿಸಿ ಪುಂಡರ ಪತ್ತೆಗೆ ಪೊಲೀಸರು ಕಾರ್ಯಾಚರಣೆಗಿಳಿದಿದ್ದಾರೆ.
ಕೆರೆಯಲ್ಲಿ ಮುಳುಗುತ್ತಿದ್ದ ಯುವಕನ ಕಾಪಾಡಲು ಹೋಗಿ ಇಬ್ಬರೂ ನೀರುಪಾಲು!
ತುಮಕೂರು: ನೀರಿನಲ್ಲಿ ಮುಳುಗುತ್ತಿದ್ದ ಯುವಕನನ್ನ ಕಾಪಾಡಲು ಹೋಗಿ ಇಬ್ಬರು ನೀರುಪಾಲು ಆಗಿರುವ ದುರ್ಘಟನೆ ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ತುಂಬಾಡಿ ದೊಡ್ಡ ಕೆರೆಯಲ್ಲಿ ನಡೆದಿದೆ. ಕೃಷ್ಣಪ್ಪ (45), ನಿತೀನ್(11) ಮೃತ ದುರ್ದೈವಿಗಳು. ನಿನ್ನೆ ಸಂಜೆ ಸ್ನೇಹಿತರ ಜೊತೆ ತುಂಬಾಡಿ ಕೆರೆಯಲ್ಲಿ ಈಜಲು ಹೋಗಿದ್ದ ನಿತೀನ್. ಈಜು ಬರದಿದ್ದರೂ ಕೆರೆಗೆ ಇಳಿದಿದ್ದ ನಿತೀನ್.
ಕೆರೆಯಲ್ಲಿ ಮುಳುಗುತ್ತಿರುವುದನ್ನು ಕಂಡ ಕೃಷ್ಣಪ್ಪ, ನಿತೀನ್‌ನನ್ನ ಕಾಪಾಡಲು ಯತ್ನಿಸಿದ್ದಾನೆ. ಆದರೆ ಈ ವೇಳೆ ನಿತೀನನ್ನು ಕಾಪಾಡುವ ಯತ್ನದಲ್ಲಿ ಇಬ್ಬರೂ ನೀರು ಪಾಲಾಗಿದ್ದಾರೆ. ಈ ಘಟನೆ ಸಂಬಂಧ ತಕ್ಷಣ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದ ಸ್ಥಳಿಯರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತಾಂತರ ಆರೋಪ: ವೈದ್ಯೆ ಸೇರಿದಂತೆ ಮೂವರ ವಿರುದ್ಧ ಕೇಸ್
ನಡುರಸ್ತೆಯಲ್ಲೇ ಮಹಿಳೆಯ ಬರ್ಬರ ಹತ್ಯೆ!
ವಿಜಯಪುರ: ಮಹಿಳೆಯನ್ನು ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಹುಡ್ಕೊ ಕಾಲೊನಿಯಲ್ಲಿ ಭಾನುವಾರ ಸಂಭವಿಸಿದೆ. ಸಿಂದಗಿ ಪಟ್ಟಣದ ಹುಡ್ಕೊ ಕಾಲೊನಿಯ ಶಾಂತಾಬಾಯಿ ತಳವಾರ (54) ಕೊಲೆಗೀಡಾದ ಮಹಿಳೆ. ಶಾಂತಾಬಾಯಿ ತಳವಾರ ಅವಳಿಗೆ ಹರಿತವಾದ ಆಯುಧದಿಂದ ತಲೆಗೆ ಹೊಡೆದು, ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿಯೇ ಬೈಕ್‌ವೊಂದು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲಿಸಿದರು. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.