
ಬೆಂಗಳೂರು(ಫೆ.03): ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ರಾಜಗೋಪಾಲ ನಗರ ಠಾಣೆಯಲ್ಲಿ ನಡೆದಿದೆ.
ಶಿವಸ್ವಾಮಿ ಹಲ್ಲೆಗೊಳಗಾದ ಕಾನ್ಸ್‌ಟೇಬಲ್, ಘಟನೆಯಲ್ಲಿ ಕಾನ್ಸ್‌ಟೇಬಲ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಆರೋಪಿ ರೌಡಿ ಸ್ಲಂ ಭರತ್ (25) ಮತ್ತು ಆತನ ಸಹಚರರಾದ ಬಾಗಲಗುಂಟೆ ಸಿದ್ಧ (23), ಸುನಾಮಿ ಅರುಣ್ (24). ಬೇಕರಿ ರಘು (24) ಸೇರಿ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೋಹನ್ ಎಂಬುವನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಬನಶಂಕರಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸ್ಲಂ ಭರತ್ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರ ಬಂದಿದ್ದ. ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ಓಡಾಡುತ್ತಿದ್ದ. ಈ ಸಂಬಂಧ ಆರೋಪಿ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. ಆರೋಪಿ ಪತ್ತೆಗಾಗಿ ರಾಜಗೋಪಾಲನಗರ ಠಾಣೆ ಪೊಲೀಸರು ಎರಡು ಪ್ರತ್ಯೇಕ ತಂಡಗಳಲ್ಲಿ ಕಾರ್ಯಾಚರಣೆ ಕೈಗೊಂಡಿದ್ದರು.
ಜ.28ರಂದು ರಾತ್ರಿ ಆರ್.ಕೆ.ಲೇಔಟ್‌ನಲ್ಲಿ ಬಂಧಿತ ಆರೋಪಿ ಮೋಹನ್ ಮನೆಯಲ್ಲಿ ಸುನಾಮಿ ಅರುಣ್ ಸಹೋದರಿಯ ಹುಟ್ಟು ಹಬ್ಬ ಆಚರಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ರಾತ್ರಿ 11.50ರಲ್ಲಿ ಬಂಧಿಸಲು ಮುಂದಾದಾಗ ಸ್ಲಂ ಭರತ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ