ಸುಮಾರು ಐದು ಮಂದಿ ಏಕಾಏಕಿ ಜಯಪ್ರಕಾಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ತಪ್ಪಿಸಿಕೊಂಡು ಓಡಿದ ಜಯಪ್ರಕಾಶ್ ಸಮೀಪದಲ್ಲೇ ಇದ್ದ ವಿಜಯ ಸಾಗರ ಹೋಟೆಲ್‌ಗೆ ನುಗ್ಗಿದ್ದಾನೆ. ಅಷ್ಟರಲ್ಲಿ ಬೆನ್ನಟ್ಟಿ ಬಂದ ದುಷ್ಕರ್ಮಿಗಳು ಹೋಟೆಲ್‌ನೊಳಗೆ ನುಗ್ಗಿ ಜಯಪ್ರಕಾಶ್‌ನನ್ನು ಮನಬಂದಂತೆ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.
ಬೆಂಗಳೂರು(ಡಿ.25): ರೌಡಿಯೊಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಬರ್ಬರವಾಗಿ ಕೊಚ್ಚಿ ಕೊಲೆಗೈದಿರುವ ಘಟನೆ ಭಾನುವಾರ ಸಂಜೆ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜಯಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ (33) ಕೊಲೆಯಾದ ರೌಡಿ. ಹನುಮ ಜಯಂತಿ ಪ್ರಯುಕ್ತ ಭಾನುವಾರ ಲಕ್ಕಸಂದ್ರ ಬಸ್ ನಿಲ್ದಾಣದ ಸಮೀಪದ ಆಂಜನೇಯ ದೇವಸ್ಥಾನದಲ್ಲಿ ಆಯೋಜಿಸಿದ್ದ ಅನ್ನದಾನ ಕಾರ್ಯಕ್ರಮದಲ್ಲಿ ಜಯಪ್ರಕಾಶ್ ಭಾಗಿಯಾಗಿದ್ದ. ಸಂಜೆ 6.45ರ ಸುಮಾರಿಗೆ ಸುಮಾರು ಐದು ಮಂದಿ ಏಕಾಏಕಿ ಜಯಪ್ರಕಾಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ತಪ್ಪಿಸಿಕೊಂಡು ಓಡಿದ ಜಯಪ್ರಕಾಶ್ ಸಮೀಪದಲ್ಲೇ ಇದ್ದ ವಿಜಯ ಸಾಗರ ಹೋಟೆಲ್‌ಗೆ ನುಗ್ಗಿದ್ದಾನೆ. ಅಷ್ಟರಲ್ಲಿ ಬೆನ್ನಟ್ಟಿ ಬಂದ ದುಷ್ಕರ್ಮಿಗಳು ಹೋಟೆಲ್‌ನೊಳಗೆ ನುಗ್ಗಿ ಜಯಪ್ರಕಾಶ್‌ನನ್ನು ಮನಬಂದಂತೆ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.
undefined
ಪದೇ ಪದೇ ಅಂದರ್ ಆಗ್ತಿದ್ದವ ಮರ್ಡರ್..! ಅವನ ಕೊಲೆಗೆ ಕಾರಣ ಆತ ಕದ್ದ ಮಾಲು..!
ಘಟನಾ ಸ್ಥಳಕ್ಕೆ ಆಡುಗೋಡಿ ಪೊಲೀಸರು, ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಜಯಪ್ರಕಾಶ್ 2006ರಲ್ಲಿ ಹತ್ಯೆ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿ ಬಂದಿದ್ದ. ಬಳಿಕ ಆಟೋ ಓಡಿಸಿಕೊಂಡಿದ್ದ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರ ಐದು ತಂಡ ರಚಿಸಲಾಗಿದೆ. ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿದ್ದಾರೆ.