ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಕೊಲೆ

By Girish Goudar  |  First Published Dec 31, 2023, 8:59 AM IST

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಬಳಿಯ ಕುಣಿಗಲ್ ಟು ಮದ್ದೂರು ಬೈ ಪಾಸ್‌ನಲ್ಲಿ ನಡೆದ ಘಟನೆ. 


ತುಮಕೂರು(ಡಿ.31):  ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಬಳಿಯ ಕುಣಿಗಲ್ ಟು ಮದ್ದೂರು ಬೈ ಪಾಸ್‌ನಲ್ಲಿ ನಿನ್ನೆ(ಶನಿವಾರ) ರಾತ್ರಿ ನಡೆದಿದೆ. ಸುರೇಶ್ @ ಕ್ಯಾಪ್ಟನ್ ಸುರೀ (40) ಕೊಲೆಯಾದ ರೌಡಿಶೀಟರ್.

ಕೊಲೆಯಾದ ಸುರೇಶ್ ಹುಲಿಯೂರುದುರ್ಗ ಬಳಿಯ ಕಂಪ್ಲಾಪುರದಲ್ಲಿ ವಾಸವಿದ್ದನು. ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಎನ್ನಲಾಗ್ತಿದೆ. ಸುರೇಶ್ ಕೇವಲ ಮೂರು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದನು. 

Tap to resize

Latest Videos

undefined

ಬೆಂಗಳೂರು ಹನುಮ ಜಯಂತಿಯಲ್ಲಿ ಅನ್ನದಾನ ಮಾಡುತ್ತಿದ್ದವನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಹುಲಿಯೂರುದುರ್ಗ ಬೈಪಾಸ್ ಬಳಿ ತೆರಳುತ್ತಿದ್ದಾಗ, ದುಷ್ಕರ್ಮಿಗಳ ತಂಡ ಅಟ್ಯಾಕ್ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಎಸ್ಕೇಪ್ ಆಗಿದ್ದಾರೆ.  ಘಟನಾ ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಹಾಗೂ ಎಸ್‌ಪಿ ಅಶೋಕ್, ಎಎಸ್‌ಪಿ ಮರಿಯಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ನಾಪತ್ತೆಯಾದ ಆರೋಪಿಗಳಿಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಮೃತದೇಹವನ್ನ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

click me!