
ಮಂಗಳೂರು(ನ.26): ದುಷ್ಕರ್ಮಿಗಳ ತಂಡವೊಂದು ರೌಡಿಶೀಟರ್ ಓರ್ವನನ್ನು ಭೀಕರವಾಗಿ ಹತ್ಯೆಗೈದ ಘಟನೆ ನಗರದ ಬೊಕ್ಕಪಟ್ಟಣದ ಕರ್ನಲ್ ಗಾರ್ಡನ್ ಒಳಗಡೆ ನಿನ್ನೆ(ಬುಧವಾರ) ರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ಇಂದ್ರಜೀತ್ (29) ಎಂದು ಹೇಳಲಾಗಿದ್ದು, ಈತ ರೌಡಿಶೀಟರ್ ಆಗಿದ್ದ ಎಂದು ಹೇಳಲಾಗುತ್ತಿದೆ. ಬುಧವಾರ ರಾತ್ರಿ ಹತ್ಯೆಗೀಡಾದ ಇಂದ್ರಜೀತ್ ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು ಅಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿತ್ತು ಎಂದು ಹೇಳಲಾಗುತ್ತಿದೆ.
ಉದ್ಯೋಗಕ್ಕಾಗಿ ತಂದೆಯನ್ನೇ ಕೊಂದ ನಿರುದ್ಯೋಗಿ ಪುತ್ರ!
ಘಟನೆ ನಡೆದ ಬಳಿಕ ಬೆಳಗಿನ ಜಾವ ಸುಮಾರು 2 ಗಂಟೆಗೆ ಕರ್ನಲ್ ಗಾರ್ಡನ್ ಬಳಿ ಇಂದ್ರಜೀತ್ ಹತ್ಯೆಗೈಯಲಾಗಿದೆ. ಈ ಹಿಂದೆ ಈತನ ಮೇಲೆ ತಲವಾರ್ ದಾಳಿ ನಡೆದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈತನನ್ನ ಯಾರು ಕೊಲೆ ಮಾಡಿದರು, ಯಾವ ಉದ್ದೇಶಕ್ಕಾಗಿ ಹತ್ಯೆಗೈಯಲಾಗಿದೆ ಎಂಬುದರ ಬಗ್ಗೆ ಪೊಲೀಸರ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ