ಮುಜ್ಜು ಅಲಿಯಾಸ್ ಮುಜಾಯಿದ್ದೀನ್ ಹತ್ಯೆಯಾದ ವ್ಯಕ್ತಿ. ಈತನ ವಿರುದ್ಧ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಇಬ್ಬರು ಪತ್ನಿಯರನ್ನು ಹೊಂದಿದ್ದ ಮುಜಾಯಿದ್ದೀನ್ನನ್ನು ಗುರುವಾರ ಮಧ್ಯ ರಾತ್ರಿ ಎರಡನೇ ಪತ್ನಿ ಮನೆ ಮುಂಭಾಗದಲ್ಲಿಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹತ್ಯೆಗೈಯ್ಯಲಾಗಿದೆ.
ಭದ್ರಾವತಿ(ಜು.22): ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ರೌಡಿಶೀಟರೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮುಜ್ಜು ಅಲಿಯಾಸ್ ಮುಜಾಯಿದ್ದೀನ್ (32) ಹತ್ಯೆಯಾದ ವ್ಯಕ್ತಿ. ಈತನ ವಿರುದ್ಧ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಇಬ್ಬರು ಪತ್ನಿಯರನ್ನು ಹೊಂದಿದ್ದ ಮುಜಾಯಿದ್ದೀನ್ನನ್ನು ಗುರುವಾರ ಮಧ್ಯ ರಾತ್ರಿ ಎರಡನೇ ಪತ್ನಿ ಮನೆ ಮುಂಭಾಗದಲ್ಲಿಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹತ್ಯೆಗೈಯ್ಯಲಾಗಿದೆ.
ಅಪ್ತಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಪಾದ್ರಿ ಬಂಧನ-ಸಂಘಟನೆಗಳು ಆಕ್ರೋಶ
ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ, ಹಿರಿಯ ಪೊಲೀಸ್ ಅಧೀಕ್ಷಕ ಜಿತೇಂದ್ರಕುಮಾರ್ ದಯಾಮ ಹಾಗೂ ಪೇಪರ್‌ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಲಾಗಿದೆ. ಘಟನೆ ಸಂಬಂಧ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಕೊಲೆಯಾದ ಮುಜಾಯಿದ್ದೀನ್ ಸಹೋದರ ದೂರು ದಾಖಲಿಸಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.