ಡ್ರಗ್ಸ್ ಪ್ರಕರಣ; ಆದಿತ್ಯ ಆಳ್ವಾ ಅರ್ಜಿ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್!

By Suvarna NewsFirst Published Dec 17, 2020, 10:55 PM IST
Highlights

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಸಂಜನಾ ಗಲ್ರಾಣಿ ಇದೀಗ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇತ್ತ ಬಂಧನಕ್ಕೂ ಮುನ್ನವೇ ಪರಾರಿಯಾದ ಡ್ರಗ್ಸ್ ಆರೋಪಿ ಆದಿತ್ಯ ಆಳ್ವಾ ಬಂಧನದಿಂದ ತಪ್ಪಿಸಿಕೊಳ್ಳಲು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. 

ನವದೆಹಲಿ(ಡಿ.17):  ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ ಇದೀಗ ಮತ್ತೆ ಸದ್ದು ಮಾಡುತ್ತಿದೆ. ನಟಿ ಸಂಜನಾ ಗಲ್ರಾಣಿ ಬೇಲ್ ಮೂಲಕ ಹೊರಬಂದ ಬೆನ್ನಲ್ಲೇ ಇದೀಗ ಡ್ರಗ್ಸ್ ಪ್ರಕರಣ ಮತ್ತೆ ಸಂಚಲನ ಮೂಡಿಸುತ್ತಿದೆ. ಇದರ ಬೆನಲ್ಲೇ ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲು ನಿರಾಕರಿಸಿದೆ.

ಬೆಂಗಳೂರು ಡ್ರಗ್ಸ್ ಜಾಲದ ಆರನೇ ಆರೋಪಿಯಾಗಿರುವ ಆದಿತ್ಯ ಆಳ್ವಾ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾನೆ. ತನ್ನ ಬಂಧನ ಖಚಿತವಾಗುತ್ತಿದ್ದಂತೆ ಆದಿತ್ಯ ಆಳ್ವಾ ನೇರವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ತನಗೆ ನಿರೀಕ್ಷಣಾ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. 

ಅದಿತ್ಯ ಆಳ್ವಾ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಇಷ್ಟೇ ಅಲ್ಲ ಹೈಕೋರ್ಟ್‌ಗೆ ತೆರಳಿ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಇಷ್ಟೇ ಅಲ್ಲ, ಸುಪ್ರೀಂ ಕೋರ್ಟ್ ಈ ರೀತಿ ಸಮಯ ವ್ಯರ್ಥ ಮಾಡುವುದಿಲ್ಲ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. 
 

click me!