
ಬೆಂಗಳೂರು(ನ. 03) ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿಮಣಿಯರಿಗೆ ಜಾಮೀನು ಸಿಕ್ಕಿಲ್ಲ, ರಾಗಿಣಿ, ಸಂಜನಾ ಮತ್ತು ಉಳಿದ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
"
ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ರಾಹುಲ್ , ರವಿಶಂಕರ್, ಲೂಮ್ ಪೆಪ್ಪರ್ ಸೇರಿ ಆರು ಜನರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ವಜಾ ಮಾಡಿದ್ದು ಮುಂದಿನ ಹಾದಿ ಮತ್ತ್ಟು ಕಠಿಣವಾಗಿದೆ.
ರಾಗಿಣಿ ನಂಟಿನ ಕಾರಣ ನಿರೀಕ್ಷಣಾ ಜಾಮೀನು ಪಡೆದ ಕೈ ನಾಯಕ
ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ರಾಗಿಣಿ, ಸಂಜನಾ ಹಾಗೂ ಇನ್ನಿತರೆ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಈ ಹಿಂದೆ ಎನ್ಡಿಪಿಎಸ್ ನ್ಯಾಯಾಲಯ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ನಟಿಯರಿಬ್ಬರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಸಿಸಿಬಿ ನಟಿಮಣಿಯರಿಗೆ ಜಾಮೀನು ನೀಡದಂತೆ ಜಾಮೀನು ನೀಡದಂತೆ ಮನವಿ ಮಾಡಿತ್ತು.
"
ಈಗ ಹೈಕೋರ್ಟ್‌ನಲ್ಲೂ ಜಾಮೀನು ಅರ್ಜಿ ವಜಾಗೊಂಡಿದ್ದು, ಮುಂದೆ ರಾಗಿಣಿ, ಸಂಜನಾ ಸೇರಿದಂತೆ ಇತರೆ ಆರೋಪಿಳಿಗೆ ಸುಪ್ರೀಂ ಕೋರ್ಟ್ ಒಂದೇ ದಾರಿಯಾಗಿದೆ.
ನಟಿಮಣಿಯರು ಈಗಾಗಲೇ ಒಂದೂವರೆ ತಿಂಗಳು ಕಾಲ ಜೈಲಿನಲ್ಲಿ ಕಳೆದಿದ್ದಾರೆ.ಸಿಸಿಬಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ ಮೇಲೆ ಕೆಳ ನ್ಯಾಯಾಲಯದಲ್ಲಿ ಮತ್ತೆ ಅರ್ಜಿ ಹಾಕಬಹುದು. ಅದಕ್ಕೆ ಇನ್ನು ಕೆಲ ದಿನ ಹಿಡಿಯಲಿದ್ದು ಅಲ್ಲಿಯವರೆಗೆ ಜೈಲುವಾಸ ಖಚಿತ.
ಹಾಗಾದರೆ ಜಾಮೀನು ನಕಾರಕ್ಕೆ ಕಾರಣವಾದ ಅಂಶಗಳು ಯಾವುದು?
* ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದೆ
* ಆದಿತ್ಯಾ ಆಳ್ವಾ , ಶಿವಪ್ರಕಾಶ್ ಸೇರಿ ಪ್ರಮುಖ ಆರೋಪಿಗಳು ನಾಪತ್ತೆ
* ಬೇಲ್ ಸಿಕ್ಕರೆ ಸಾಕ್ಷಿ ನಾಶ ಸಾಧ್ಯತೆ,
* ಪ್ರಕರಣದಲ್ಲಿ ಸಾಕಷ್ಟು ಆರೋಪಿಗಳ ಬಂಧನ ಆಗಬೇಕಿದೆ
* ಜಾಮೀನು ಸಿಕ್ರೆ ಉಳಿದ ಆರೋಪಿಗಳಿಗೆ ಸಹಾಯ ಆಗಬಹುದು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ