ಭಾನುವಾರದ ರಜೆಯನ್ನು ಮಜಾ ಮಾಡಲು ಹೋಗಿದ್ದ ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ನಡೆದಿದೆ.
ರಾಯಚೂರು, (ಸೆಪ್ಟೆಂಬರ್.19): ಸೆಲ್ಫಿ ತೆಗೆದುಕೊಳ್ಳಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ಕಲಮಲಾ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆ ಹೈಡ್ರಲ್ ಪ್ರಾಜೆಕ್ಟ್‌ನಲ್ಲಿ ಈ ಘಟನೆ ನಡೆದಿದೆ. ರಾಯಚೂರಿನ ಬೆಸ್ಟ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್(16) ಮತ್ತು ವೈಭವ (16) ಮೃತರು. ನಿನ್ನೆ(ಸೆ.18) ಸಂಜೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಇಂದು (ಸೋಮವಾರ) ಎನ್.ಆರ್. ಶೆಟ್ಟಿಯ ಮುಚ್ಚಿರುವ ಹೈಡ್ರಲ್ ಪ್ರಾಜೆಕ್ಟ್‌ನಲ್ಲಿ ಶವವಾಗಿ ಪತ್ತೆ ಆಗಿದ್ದಾರೆ.
undefined
ಪಿಕ್ನಿಕ್‍ಗಾಗಿ ಬಂದಿದ್ದ ವೇಳೆ ವಿದ್ಯಾರ್ಥಿಗಳು ಸೆಲ್ಫಿ ತೆಗೆಯುವಾಗ ಕಾಲುವೆಗೆ ಬಿದ್ದಿದ್ದಾರೆ. ಅದಾದ ಬಳಿಕ ನಾಪತ್ತೆ ಆಗಿದ್ದರು. ಮೃತರು ರಾಯಚೂರು ನಗರದ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದ್ದು, ನಿನ್ನೆ ಭಾನುವಾರ ರಜೆ ಇರುವುದರಿಂದ ನಾಲ್ವರು ಪಿಕ್‌ನಿಕ್‌ಗೆ ತೆರಳಿದ್ದಾರೆ.
ರಾಯಚೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಈ ವೇಳೆ ಕಾಲುವೆಯಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ನಾಲ್ವರು ವಿದ್ಯಾರ್ಥಿಗಳು ಕಾಲು ಜಾರಿ ಕಾಲುವೆಗೆ ಬಿದ್ದಿದ್ದಾರೆ. ನಾಲ್ವರಲ್ಲಿ ನಾಗೇಂದ್ರ ಹಾಗೂ ತರುಣ್ ಈಜಿ ದಡ ಸೇರಿದ್ರೆ, ಇನ್ನಿಬ್ಬರು ಕೊಚ್ಚಿಕೊಂಡು ಹೋಗಿದ್ದರು.
ಅಗ್ನಿಶಾಮಕ ಸಿಬ್ಬಂದಿ ನಾಗಪ್ಪ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಇನ್ನಿಬ್ಬರ ವಿದ್ಯಾರ್ಥಿಗಳು ಶವ ಹೊರತೆಗೆದಿದ್ದಾರೆ. ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.