ತನ್ನ ಬಗ್ಗೆ ಶಿಕ್ಷಕ ಮಾನಹಾನಿಕಾರಕ ಮೆಸೇಜ್ ಕಳಿಸಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೋರ್ವಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಮಂಗಳೂರು (ಫೆ.12): ತನ್ನ ಬಗ್ಗೆ ಶಿಕ್ಷಕ ಮಾನಹಾನಿಕಾರಕ ಮೆಸೇಜ್ ಕಳಿಸಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೋರ್ವಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಧರ್ಮಸ್ಥಳದ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಡ್ರಾಯಿಂಗ್ ಶಿಕ್ಷಕನಾಗಿರುವ ರೂಪೇಶ್ ಪೂಜಾರಿ ಎಂಬಾತನಿಂದ ಮಾನಹಾನಿಕಾರಕ ಮೆಸೇಜ್ ರವಾನಿಸಿ ಕೃತ್ಯ. ಮೃತ ವಿದ್ಯಾರ್ಥಿನಿ ಬಗ್ಗೆ ಇನ್ನೋರ್ವ ವಿದ್ಯಾರ್ಥಿನಿಗೆ ಕೆಟ್ಟದಾಗಿ ಮೆಸೇಜ್ ಕಳಿಸಿರುವ ಆರೋಪಿ. ಈ ವಿಚಾರ ತಿಳಿದು ತೀವ್ರವಾಗಿ ಮನನೊಂದಿದ್ದ ಮೃತ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಗೆ ಮಂಗಳೂರು ಹಾಗೂ ಬಳಿಕ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿರುವ ವಿದ್ಯಾರ್ಥಿನಿ.
ಬೆಂಗಳೂರು: ಮದುವೆಯಾಗಿ ಎರಡೇ ವರ್ಷದಲ್ಲಿ ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ!
ಮೃತ ವಿದ್ಯಾರ್ಥಿನಿ ಅನ್ಯಾಯದ ಸಾವಿನಿಂದ ಕುಟುಂಬಸ್ಥರ ಅಕ್ರಂದನ ಮುಗಿಲುಮುಟ್ಟಿದೆ. ಆರೋಪಿ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಜರುಗಿಸಿ ಮೃತ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಪೋಷಕರು, ಸಾರ್ವಜನಿಕರು ಆಗ್ರಹಿಸಿದ್ದಾರೆ. ಸದ್ಯ ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ರೂಪೇಶ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆಗೆ ಮುಂದಾಗಿದ್ದಾರೆ.
ಕೊಪ್ಪಳ: ಪತಿಗೆ ಥಳಿಸಿ ವಿವಾಹಿತ ಮಹಿಳೆಯನ್ನ ಎಳೆದೊಯ್ದು ಅತ್ಯಾಚಾರ ನಡೆಸಿದ್ದ ಗ್ಯಾಂಗ್ ಅರೆಸ್ಟ್