ಲೈಂಗಿಕ ದೌರ್ಜನ್ಯ ನಡೆಸಿ 7 ವರ್ಷದ ಬಾಲಕಿ ಹತ್ಯೆ ಮಾಡಿದ ನೆರೆಮನೆಯ ಕಾಮುಕ: ಗೋಣಿಚೀಲದಲ್ಲಿ ಶವ ಪತ್ತೆ

By BK Ashwin  |  First Published Mar 28, 2023, 12:55 PM IST

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಿಲ್ಜಾಲಾ ಸಮೀಪದ ಕುಸ್ತಿಯಾ ಎಂಬಲ್ಲಿ ನಾಪತ್ತೆಯಾದ ಕೆಲ ಗಂಟೆಗಳ ಬಳಿಕ ಭಾನುವಾರ ತಡರಾತ್ರಿ ಶವ ಪತ್ತೆಯಾಗಿದೆ.


ಕೋಲ್ಕತ್ತ (ಮಾರ್ಚ್‌ 28, 2023): ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದ ತಿಲಜಾಲಾ ಪ್ರದೇಶದಲ್ಲಿ 7 ವರ್ಷದ ಬಾಲಕಿಯನ್ನು ಆಕೆಯ ನೆರೆಹೊರೆಯ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿ ನಂತರ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆಗ್ನೇಯ ಕೋಲ್ಕತ್ತಾದ ಜನದಟ್ಟಣೆಯ ಪ್ರದೇಶದಲ್ಲಿ ಕಾಣೆಯಾಗಿದ್ದ 7 ವರ್ಷದ ಬಾಲಕಿ ಗೋಣಿ ಚೀಲದೊಳಗೆ ಶವವಾಗಿ ಪತ್ತೆಯಾಗಿದ್ದು, ಮಗು ವಾಸಿಸುತ್ತಿದ್ದ ಅದೇ ಕಟ್ಟಡದಲ್ಲಿ ವಾಸಿಸುತ್ತಿದ್ದ ನೆರೆಹೊರೆಯವರ ಮನೆಯಲ್ಲಿ ಶವ ಮುಚ್ಚಿಡಲಾಗಿತ್ತು ಎಂದು ತಿಳಿದುಬಂದಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಿಲ್ಜಾಲಾ ಸಮೀಪದ ಕುಸ್ತಿಯಾ ಎಂಬಲ್ಲಿ ನಾಪತ್ತೆಯಾದ ಕೆಲ ಗಂಟೆಗಳ ಬಳಿಕ ಭಾನುವಾರ ತಡರಾತ್ರಿ ಶವ ಪತ್ತೆಯಾಗಿದೆ. ಈ ಹಿನ್ನೆಲೆ ಸಿಟ್ಟಿಗೆದ್ದ ಸ್ಥಳೀಯ ಜನರು ಸೋಮವಾರ ರಸ್ತೆ ಮತ್ತು ರೈಲ್ವೆ ಹಳಿಗಳನ್ನು ನಿರ್ಬಂಧಿಸಿದ್ದಾರೆ. ಜತೆಗೆ ಪೊಲೀಸ್ ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ.

Tap to resize

Latest Videos

ಇದನ್ನು ಓದಿ: Saudi Arabia: ಮೆಕ್ಕಾಗೆ ಹೋಗುತ್ತಿದ್ದ ಬಸ್ ಭೀಕರ ಅಪಘಾತ: 20 ಯಾತ್ರಿಕರು ಬಲಿ, 29 ಮಂದಿಗೆ ಗಂಭೀರ ಗಾಯ

ಕುಸ್ತಿಯಾದ ಶ್ರೀ ಧರ್ ರಾಯ್ ರಸ್ತೆಯ ನಿವಾಸಿಯಾಗಿದ್ದ ಬಾಲಕಿ ಭಾನುವಾರ ಬೆಳಗ್ಗೆಯಿಂದ ಕಾಣೆಯಾಗಿದ್ದಳು. ವ್ಯಾಪಕ ಹುಡುಕಾಟದ ನಂತರ ಸ್ಥಳೀಯ ಅಪಾರ್ಟ್ಮೆಂಟ್ ಬ್ಲಾಕ್‌ನಲ್ಲಿರುವ ಫ್ಲಾಟ್‌ವೊಂದರಲ್ಲಿ ಆಕೆಯ ಶವವನ್ನು ಕಂಡುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಫ್ಲಾಟ್ ಮಾಲೀಕನನ್ನು ಬಂಧಿಸಲಾಗಿದ್ದು, ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇನ್ನೊಂದೆಡೆ, ಕಾಣೆಯಾದ ಬಾಲಕಿಯನ್ನು ಹುಡುಕುವಲ್ಲಿ ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ, ಸ್ಥಳೀಯರು ತಿಲ್ಜಾಲಾ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಮತ್ತು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಭಾನುವಾರ ರಾತ್ರಿ ಸ್ಥಳೀಯ ಪ್ರದೇಶದಲ್ಲಿ ಹಲವಾರು ವಾಹನಗಳನ್ನು ಧ್ವಂಸ ಮಾಡಿದ್ದಾರೆ. ಇನ್ನು, ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru: ಕಾರಿನ ಜಿಪಿಎಸ್‌ನಿಂದ ಬಯಲಾಯ್ತು ಪತ್ನಿಯ ಅನೈತಿಕ ಸಂಬಂಧ..!

ಬಳಿಕ, ಬಂಧಿತ ಮೂವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸ್ಥಳೀಯ ಜನರು ಸೋಮವಾರ ಬೆಳಗ್ಗೆ ತಿಲ್ಜಾಲಾ ಪ್ರದೇಶದಲ್ಲಿ ರಸ್ತೆ ತಡೆ ನಡೆಸಿದ್ದಾರೆ ಅಲ್ಲದೆ,. ಮಧ್ಯಾಹ್ನ, ಅವರು ದಕ್ಷಿಣ ಸೀಲ್ದಾಹ್ ವಿಭಾಗದಲ್ಲಿ ಪ್ರಮುಖ ಇಎಂ ಬೈಪಾಸ್ ಮತ್ತು ರೈಲ್ವೆ ಹಳಿಗಳನ್ನು ತಡೆದು ರಸ್ತೆ ಸಂಚಾರ ಮತ್ತು ರೈಲು ಸೇವೆಗಳನ್ನು ಅಡ್ಡಿಪಡಿಸಿದ್ದಾರೆ. ಅಲ್ಲದೆ, ಮೂರು ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಲಾಗಿದ್ದು, ಅವುಗಳಲ್ಲಿ ಒಂದನ್ನು ಸುಟ್ಟು ಹಾಕಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉದ್ರಿಕ್ತ ಜನರನ್ನು ಚದುರಿಸಲು ಭದ್ರತಾ ಪಡೆಗಳ ತಂಡ ಅಲ್ಲಿಗೆ ತಲುಪಿದಾಗ ಸ್ಥಳೀಯರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ, ನಾವು ಪ್ರತಿಭಟನಾಕಾರರೊಂದಿಗೆ ಮಾತನಾಡುತ್ತಿದ್ದೇವೆ ಮತ್ತು ಪರಿಸ್ಥಿತಿಯನ್ನು ಗಮನಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹೋಂ ವರ್ಕ್‌ ಮಾಡದಿದ್ದಕ್ಕೆ 7 ವರ್ಷದ ವಿದ್ಯಾರ್ಥಿಗೆ ಹೊಡೆದು ಸಾಯಿಸಿದ ವಸತಿಶಾಲೆ ಮಾಲೀಕ..!

click me!