
ಬೆಂಗಳೂರು(ಮಾ. 05) ರಮೇಶ್ ಜಾರಕಿಹೊಳಿ ಕಾಮಕಾಂಡ ಪ್ರಕರಣಕ್ಕೆ ಸಂಬಂಧಿಸಿ ಕೊನೆಗೂ ರಮೇಶ್ ಜಾರಕಿಹೊಳಿ ವಿರುದ್ಧ ಕೇಸ್ ದಾಖಲಾಗಿದೆ.
ರಮೇಶ್ ಜಾರಕಿಹೊಳಿ ವಿರುದ್ದ ಸುವೊಮೊಟೋ ಕೇಸ್ ದಾಖಲಾಗಿದೆ. ಕನ್ನಡ ರಕ್ಷಣಾ ವೇದಿಕೆ ದೂರು ಆಧರಿಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಯಾರು ಈ ದಿನೇಶ್.. ರಮೇಶ್ ಗೆ ಮಾತ್ರವಲ್ಲ ಡಿಕೆಶಿಗೂ ಕಾಡಿದ್ದರು!
ರಾಜ್ಯ ಮಹಿಳಾ ಆಯೋಗದ ಆಧ್ಯಕ್ಷೆ ಪ್ರಮೀಳಾ ನಾಯ್ಡು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ದೂರಿನ ಅನ್ವಯ ಸುವೊಮೊಟೋ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಯುವತಿಯನ್ನು ಕರೆದು ಹೇಳಿಕೆ ಪಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ರಮೇಶ್ ಜಾರಕಿಹೊಳಿ ಅವರನ್ನು ಕರೆದು ಮಾತನಾಡಲು ಪೊಲೀಸ್ ತನಿಖೆ ಆಗುತ್ತಿದೆ ಪೊಲೀಸರು ತನಿಖೆ ನಡೆಸಲಿ ನಾವು ಪೊಲೀಸರಿಗೆ ಸಹಕಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸೆಕ್ಸ್ ಸಿಡಿಯೊಂದನ್ನು ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಬಿಡುಗಡೆ ಮಾಡಿದ್ದರು. ದೇಶಾದ್ಯಂತ ಸುದ್ದಿಯಾದ ಪ್ರಕರಣ ರಮೇಶ್ ಅವರ ಸಚಿವ ಸ್ಥಾನವನ್ನು ಕಿತ್ತುಕೊಂಡಿತ್ತು.
ದಿನೇಶ್ ಕಲ್ಲಹಳ್ಳಿ ಸಹ ಪೊಲೀಸರ ಮುಂದೆ ಹಾಜರಾಗಿ ಇನ್ನು ಹೆಚ್ಚಿನ ಮಾಹಿತಿಯನ್ನು ನೀಡಿದ್ದಾರೆ. ಸದ್ಯಕ್ಕೆ ರಾಜಕಾರಣ ವಲಯದಲ್ಲಿ ಜೋರಾಗಿ ಮಳೆ ಬಂದು ನಿಂತ ವಾತಾವರಣ ಇದೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ