Crime News ವಿದ್ಯಾರ್ಥಿನಿ ಜತೆ ಶಿಕ್ಷಕ ರೊಮ್ಯಾನ್ಸ್, ವಿಡಿಯೋ ವೈರಲ್ ಆಗ್ತಿದ್ದಂತೆಯೇ ಎಚ್ಚೆತ್ತ ಬಿಇಒ

By Suvarna News  |  First Published Jan 29, 2022, 5:27 PM IST

* ಕ್ಲಾಸ್‌ ರೂಮ್‌ನಲ್ಲಿ ವಿದ್ಯಾರ್ಥಿನಿ ಜತೆ ಶಿಕ್ಷಕ ರೊಮ್ಯಾನ್ಸ್
* ಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ಚುಂಬಿಸಿದ ಮುಖ್ಯೋಪಾಧ್ಯಾಯ
* ಮುಖ್ಯೋಪಾಧ್ಯಾಯ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು


ಮೈಸೂರು, (ಜ.29): ಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ಚುಂಬಿಸಿದ ಮುಖ್ಯೋಪಾಧ್ಯಾಯರ ವಿರುದ್ಧ ಶಿಕ್ಷಣ ಇಲಾಖೆ ಲೈಂಗಿಕ ದೌರ್ಜನ್ಯ (Sexual Assault) ಪ್ರಕರಣವನ್ನು ಪೋಕ್ಸೋ ಕಾಯ್ದೆಯಡಿ ದಾಖಲಿಸಿದೆ.

ಮೈಸೂರಿನ ಹೆಚ್ ಡಿ ಕೋಟೆ ಟೌನ್ ನ ಶಾಲೆಯಲ್ಲಿ (HD Kote Town School) ಈ ಘಟನೆ ನಡೆದಿತ್ತು. ಶಾಲೆಯಲ್ಲಿ ತಮ್ಮ ಚೇಂಬರ್ ನಲ್ಲಿ ಮುಖ್ಯೋಪಾಧ್ಯಾಯರು ವಿದ್ಯಾರ್ಥಿನಿಯನ್ನು(Student( ಚುಂಬಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದ್ದು, ಈ ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದರು.

Tap to resize

Latest Videos

undefined

ಕಾಲೇಜಿಗೆ ಚಕ್ಕರ್, ಲವ್ವಿ ಡವ್ವಿಯಲ್ಲಿ ತೊಡಗಿಕೊಂಡ ವಿದ್ಯಾರ್ಥಿಗಳು: ವಿಡಿಯೋ ವೈರಲ್

ವಿದ್ಯಾರ್ಥಿಗಳು ಕಿಟಕಿ ಮೂಲಕ ವಿಡಿಯೋವನ್ನು ಚಿತ್ರೀಕರಿಸಿದ್ದು, ವಿಡಿಯೋ ಚಿತ್ರೀಕರಣವಾಗುತ್ತಿರುವುದು ತಿಳಿಯುತ್ತಿದ್ದಂತೆಯೇ ಯುವತಿ ದೂರ ಸರಿದಿದ್ದು, ಆರೋಪಿ ಕಿಟಕಿಯ ಬಳಿ ಬಂದಿದ್ದಾರೆ.

ದೂರಿನ ಅನ್ವಯ ಬಿಇಒ ಶಾಲಾ ವಿದ್ಯಾರ್ಥಿನಿಯ ಮೇಲೆ ಮುಖ್ಯೋಪಾಧ್ಯಾಯರ ಲೈಂಗಿಕ ದೌರ್ಜನ್ಯದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಮುಖ್ಯ ಶಿಕ್ಷಕ ವಜಾ
ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದಿದ್ದ ಹೆಚ್​ ಡಿ ಕೋಟೆ ತಾಲೂಕಿನ ಶಾಲೆಯೊಂದರ ಮುಖ್ಯ ಶಿಕ್ಷಕನನ್ನು ಸೇವೆಯಿಂದ ವಜಾ ಮಾಡಲಾಗಿದೆ .ಹೆಚ್ ಡಿ ಕೋಟೆ ತಾಲೂಕಿನ ಖಾಸಗಿ ಶಾಲೆಯ ಮುಖ್ಯಶಿಕ್ಷಕರಾದ ಆರ್ ಎಂ ಅನಿಲ್‌ಕುಮಾರ್ ಸೇವೆಯಿಂದ ವಜಾಗೊಂಡ ಶಿಕ್ಷಕ. ಶಾಲೆ ಕೊಠಡಿಯೊಂದರಲ್ಲಿ ವಿದ್ಯಾರ್ಥಿನಿಯ ಜೊತೆ ಶಿಕ್ಷಕ ಅನಿಲ್​ಕುಮಾರ್​ ಅಸಭ್ಯವಾಗಿ ವರ್ತಿಸುತ್ತಿದ್ದನ್ನು ಕೆಲ ವಿದ್ಯಾರ್ಥಿಗಳು ಇದನ್ನು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

ಬಳಿಕ ಶಿಕ್ಷಕನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿ ಶಿಕ್ಷಕನ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದರು. ಹಾಗಾಗಿ, ಆ ಖಾಸಗಿ ಶಾಲೆಯ ಆಡಳಿತ ಮಂಡಳಿ ತುರ್ತು ಸಭೆಯನ್ನು ನಡೆಸಿ ಮುಖ್ಯಶಿಕ್ಷಕ ಆರ್ ಎಂ ಅನಿಲ್​ಕುಮಾರ್​ನನ್ನು ಸೇವೆಯಿಂದ ವಜಾಗೊಳಿಸಿ ಆದೇಶಿಸಿತ್ತು.

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನಿಗೂಢ ಸಾವು
ಚಿಕ್ಕಮಗಳೂರು: ಇತ್ತೀಚಿಗೆ ಮದುವೆಯಾಗಿದ್ದ ನವ ವಿವಾಹಿತೆ ಜಡಗನಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ.

ಸುಮಾ, ಶಂಕಾಸ್ಪದವಾಗಿ ಸಾವನ್ನಪ್ಪಿರುವ ವಿವಾಹಿತ ಮಹಿಳೆ. ಯುವತಿ ಪತಿ ಅಭಿಷೇಕ್​ ಜೊತೆಯಲ್ಲಿ ನಿನ್ನೆ ದಿನ ಇಡೀ ರಾತ್ರಿ ಅರಣ್ಯ ಪ್ರದೇಶದಲ್ಲೇ ಇದ್ದಳು ಎನ್ನಲಾಗಿದೆ.

ಆದರೆ ಬೆಳಗ್ಗೆ ವೇಳೆಗೆ ನವ ವಿವಾಹಿತೆ ಶವವಾಗಿ ಪತ್ತೆಯಾಗಿದ್ದಾಳೆ ಅನ್ನೋ ಆರೋಪ ಕೇಳಿಬಂದಿದೆ.

ಇನ್ನು ಮೃತ ಯುವತಿ ಒಂದು ವರ್ಷದ ಹಿಂದೆ ಅಭೀಷೇಕ್​ನನ್ನು ಪ್ರೀತಿಸಿ ಮದುವೆಯಾಗಿದ್ದಳು. ಘಟನೆ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

click me!