ಅಪ್ತಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹಿನ್ನೆಲೆ ನಗರದ ಖಾಸಗಿ ಕಾಲೇಜಿನ ಪ್ರಾಂಶುಪಾಲರೂ ಆಗಿರುವ ಕ್ರೈಸ್ತ ಪಾದ್ರಿಯೊಬ್ಬರ ವಿರುದ್ಧ ಪೋಕ್ಸೋ ಹಾಗೂ ಎಸ್ಸಿ, ಎಸ್ಟಿದೌರ್ಜನ್ಯ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ (ಜು.21): ಅಪ್ತಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹಿನ್ನೆಲೆ ನಗರದ ಖಾಸಗಿ ಕಾಲೇಜಿನ ಪ್ರಾಂಶುಪಾಲರೂ ಆಗಿರುವ ಕ್ರೈಸ್ತ ಪಾದ್ರಿಯೊಬ್ಬರ ವಿರುದ್ಧ ಪೋಕ್ಸೋ ಹಾಗೂ ಎಸ್ಸಿ, ಎಸ್ಟಿದೌರ್ಜನ್ಯ ಪ್ರಕರಣ ದಾಖಲಾಗಿದೆ.
ನಗರದ ಖಾಸಗಿ ಕಾಲೇಜಿನ ಪ್ರಾಂಶುಪಾಲರೂ ಆಗಿರುವ ಕ್ರೈಸ್ತ ಪಾದ್ರಿ ಫ್ರಾನ್ಸಿಸ್ ಫರ್ನಾಂಡೀಸ್ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರು ನೀಡಿದ ದೂರಿನ ಹಿನ್ನೆಲೆ ಕ್ರೈಸ್ತ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ಕುರಿತು ತನಿಖೆ ಕೈಗೊಂಡಿದ್ದಾರೆ. ಘಟನೆ ಬುಧವಾರ ಬೆಳಕಿಗೆ ಬಂದಿದ್ದು, ಗುರುವಾರ ಮಧ್ಯಾಹ್ನ ಆರೋಪಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.
ಶಿವಮೊಗ್ಗದ ಸರ್ಕಾರಿ ನೌಕರ ಡೆತ್‌ನೋಟ್ ಬರೆದಿಟ್ಟು ನಾಪತ್ತೆ!
ಲೈಂಗಿಕ ದೌರ್ಜನ್ಯಕ್ಕೆ ಒಳಗಾದವಳು ಅಪ್ತಾಪ್ತೆಯಾಗಿದ್ದು, ಎಸ್‌ಸಿ ಸಮುದಾಯಕ್ಕೆ ಸೇರಿದವಳಾಗಿದ್ದಾಳೆ. ಬಂಧನಕ್ಕೆ ಒಳಗಾಗಿರುವ ಪಾದ್ರಿ ವಿರುದ್ಧ ಸಾಕಷ್ಟುಆರೋಪಗಳು ಕೇಳಿಬಂದಿವೆ. ಆದರೂ ಕಾಲೇಜು ಆಡಳಿತ ಮಂಡಳಿ ಈತನ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ.
ಪ್ರತಿಭಟನೆ:
ಬಂಧಿತ ಪಾದ್ರಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ಬಂಜಾರ ಸಮುದಾಯ ಪ್ರಮುಖರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆಯನ್ನು ಖಂಡಿಸಿ ಹಿಂದೂ ಸಂಘಟನೆ ಪ್ರಮುಖರೂ ಪಾದ್ರಿ ವಿರುದ್ಧ ಧಿಕ್ಕಾರ ಕೂಗಿ, ಹಿಂದು ಮಕ್ಕಳನ್ನು ರಕ್ಷಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಶಿವಮೊಗ್ಗ: ಭೀಮನ ಅಮಾವಾಸ್ಯೆ ದಿನ ನಡೆದಿದ್ದ ಯುವತಿ ಅಪಹರಣ ಪ್ರಕರಣ ಸುಖಾಂತ್ಯ!