ನಗರದಲ್ಲಿ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕವನ್ನುಂಟು ಮಾಡಿದೆ. ಕಾಮುಕನೊಬ್ಬ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (sexual harassment)ಎಸಗಿರುವ ಘಟನೆ ವಿವೇಕನಗರ(viveknagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು (ಫೆ.11) : ನಗರದಲ್ಲಿ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕವನ್ನುಂಟು ಮಾಡಿದೆ.
ಕಾಮುಕನೊಬ್ಬ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (sexual harassment)ಎಸಗಿರುವ ಘಟನೆ ವಿವೇಕನಗರ(viveknagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗ್ಯಾರೇಜ್‌ನಲ್ಲಿ ಕ್ಲೀನರ್ ಕೆಲಸ ಮಾಡಿಕೊಂಡಿದ್ದಕಾಮುಕ ವಿಕೃತಿ ಮೆರೆದಿದ್ದಾನೆ. ಪಶ್ಚಿಮ ಬಂಗಾಳ ಮೂಲದ ಬಾಲಕಿಯ ಕುಟುಂಬ ಜೀವನ ಆಶ್ರಯಿಸಿ 2 ವರ್ಷದ ಹಿಂದೆ ಬೆಂಗಳೂರಿಗೆ ಬಂದು ಈಜೀಪುರದಲ್ಲಿ ವಾಸವಾಗಿದ್ರು. ದೌರ್ಜನ್ಯಕ್ಕೊಳಗಾದ ಬಾಲಕಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಗುರುವಾರ ಬೆಳಗ್ಗೆ ಎಂದಿನಂತೆ ಶಾಲೆಗೆ ಹೋಗುತ್ತಿದ್ದಳು. ಈ ವೇಳೆ ಎದುರಿಗೆ ಬಂದ ಆರೋಪಿ ನಿನ್ನ ಬಳಿ ಮಾತನಾಡಬೇಕು ಎಂದು ಪುಸಲಾಯಿಸಿ ಬಾಲಕಿಯನ್ನು ತಾನೂ ಕೆಲಸ ಮಾಡುತ್ತಿದ್ದ ಗ್ಯಾರೇಜ್ ಒಳಗೆ ಕರೆದುಕೊಂಡು ಹೋಗಿದ್ದಾನೆ. ನಂತರ ಬಾಲಕಿಯ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಗಾಬರಿಯಾದ ಬಾಲಕಿ ಆರೋಪಿಯಿಂದ ತಪ್ಪಿಸಿಕೊಂಡು ಅಳುತ್ತಾ ಹೊರಬಂದು ತಾಯಿಯ ಬಳಿ ಘಟನೆಯ ಬಗ್ಗೆ ವಿವರಿಸಿದ್ದಾಳೆ.
Pocso case: 13 ವರ್ಷದ ಬಾಲೆ ಗರ್ಭಿಣಿ, ಸ್ವತಃ ತಂದೆಯಿಂದಲೇ ನಡೆದಿದೆ ಪಾಪ ಕೃತ್ಯ!
ಮಗಳ ಮೇಲಾದ ದೌರ್ಜನ್ಯದ ಬಗ್ಗೆ ಸಂತ್ರಸ್ತ ಬಾಲಕಿಯ ತಾಯಿ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ಕಾಮುಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ.
ಸದ್ಯ ಪೊಲೀಸರು ಆರೋಪಿ ಫಿರೋಜ್ ಖಾನ್(Feroze Khan) ನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.