ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಗಲ್ಲಿಗೇರಿಸಲು ಆಗ್ರಹ

By Kannadaprabha News  |  First Published Nov 3, 2022, 11:28 PM IST
  • ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಗಲ್ಲಿಗೇರಿಸಲು ಆಗ್ರಹ
  • ದಕ್ಷಿಣ ಬ್ಲಾಕ್‌ ಯುವ ಕಾಂಗ್ರೆಸ್‌ನಿಂದ ಡಿಸಿ ಕಚೇರಿ ಬಳಿ ಪ್ರತಿಭಟನೆ

ಶಿವಮೊಗ್ (ನ.3): ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಶಿವಮೊಗ್ಗ ದಕ್ಷಿಣ ಬ್ಲಾಕ್‌ ಯುವ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಆಳಂದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಐಟಿಐ ವಿದ್ಯಾರ್ಥಿಯ ಬಂಧನ

Tap to resize

Latest Videos

ವಿದ್ಯಾಭ್ಯಾಸಕ್ಕೆ ಬಂದಿದ್ದ ಆಕೆ ಮೇಲೆ ಕಾಮುಕರು ಅಟ್ಟಹಾಸ ಮೆರೆದಿರುವುದು ಅತ್ಯಂತ ನೋವಿನ ಸಂಗತಿ. ಅಪ್ರಾಪ್ತೆ ಮೇಲೆ ನಡೆದ ಈ ಘಟನೆಯಿಂದಾಗಿ ಇಡೀ ಗ್ರಾಮ ಮಾತ್ರವೇ ಅಲ್ಲದೇ ರಾಜ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ರಾಜ್ಯದಲ್ಲಿ ಪದೇಪದೇ ಇಂತಹ ಘಟನೆಗಳು ನಡೆಯುತ್ತಿರುವುದು ನೋಡಿದರೇ ದೇಶದ ಕಾನೂನು ಮತ್ತು ಪೊಲೀಸ್‌ ವ್ಯವಸ್ಥೆ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವಂತಾಗಿದೆ ಎಂದು ಆರೋಪಿಸಿದರು.

ಪಾಶ್ಚಾತ್ಯ ಹಾಗೂ ಅರಬ್‌ ದೇಶಗಳಲ್ಲಿ ಇಂತಹ ಸಮಾಜಘಾತುಕ ಕ್ರೌರ್ಯ ಎಸಗುವವರಿಗೆ ಅತ್ಯಂತ ಕಠಿಣ ಶಿಕ್ಷೆ ನೀಡುವ ಕಾನೂನು ಜಾರಿಯಲ್ಲಿದೆ. ಇಂತಹ ಕಾನೂನುಗಳನ್ನು ನಮ್ಮ ದೇಶದಲ್ಲೂ ಜಾರಿಗೆ ತರಬೇಕು. ಕಲಬುರಗಿ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಯಾರೇ ಆಗಿದ್ದರೂ ಅಂತಹವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ದೇಶದಲ್ಲಿ ಜಾರಿಗೆ ತರಬೇಕು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ದಕ್ಷಿಣ ಬ್ಲಾಕ್‌ ಯುವ ಕಾಂಗ್ರೆಸ್‌ ಅಧ್ಯಕ್ಷ ವಿನಯ್‌ ತಾಂದ್ಲೆ, ದೇವೇಂದ್ರಪ್ಪ, ಬಾಲಾಜಿ, ಶರತ್‌,ಪುರಲೆ ಮಂಜು, ಪ್ರಮೋದ್‌, ಅರ್ಜುನ್‌ ವಿ.ಪಂಡಿತ್‌, ಸಂದೀಪ ಅಟೋಕ್‌, ಎಂ.ಅಶೋಕ, ಗಿರೀಶ್‌ ಮತ್ತತಿತರರು ಇದ್ದರು. ಅಪ್ರಾಪ್ತ ಹೆಂಡತಿಯ ಮೇಲೆ ಅತ್ಯಾಚಾರ ಪ್ರಕರಣ: ಪೋಕ್ಸೊ ಕೇಸ್‌ ರದ್ದುಮಾಡಿದ ಕರ್ನಾಟಕ ಹೈಕೋರ್ಟ್‌

click me!