ಹಾಸನದ ವಸತಿ ಶಾಲೆಯೊಂದರಲ್ಲಿ ಶಾಲಾ ಮಕ್ಕಳ ಮೇಲೆ ಕ್ರೌರ್ಯ ಮೆರೆದಿರುವ ಘಟನೆ ನಡೆದಿದ್ದು, ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಾಂಶುಪಾಲರು ಸೇರಿ ಐದು ಮಂದಿಯನ್ನು ಬಂಧಿಸಲಾಗಿದೆ.
ಹಾಸನ (ಮಾ.10): ಹಾಸನದ ವಸತಿ ಶಾಲೆಯೊಂದರಲ್ಲಿ ಶಾಲಾ ಮಕ್ಕಳ ಮೇಲೆ ಕ್ರೌರ್ಯ ಮೆರೆದಿರುವ ಘಟನೆ ನಡೆದಿದ್ದು, ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಾಂಶುಪಾಲರು ಸೇರಿ ಐದು ಮಂದಿಯನ್ನು ಬಂಧಿಸಲಾಗಿದೆ. ಸಮಾಜ ಇಲಾಖೆ ವ್ಯಾಪ್ತಿಯ ಹೆಣ್ಣುಮಕ್ಕಳ ವಸತಿ ಶಾಲೆಯಲ್ಲಿ ಈ ಅಮಾನುಷ ಕೃತ್ಯ ಜರಗಿದ್ದು, ವಸತಿ ಶಾಲೆಯ ಎಂಟು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಗಿಕ ದೌರ್ಜನ್ಯ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು, ಓರ್ವ ಸೆಕ್ಯೂರಿಟಿ ಗಾರ್ಡ್ ಮತ್ತಿಬ್ಬರು ಸೇರಿ ಐವರ ಬಂಧನವಾಗಿದೆ. ಕಳೆದ ಹಲವು ತಿಂಗಳಿಂದ ಹೆಣ್ಣು ಮಕ್ಕಳ ಮೇಲೆ ಇಲ್ಲಿ ದೌರ್ಜನ್ಯ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ದೌರ್ಜನ್ಯ ಸಹಿಸಲಾಗದೆ ಎರಡು ದಿನಗಳ ಹಿಂದೆ ಪ್ರಾಂಶುಪಾಲರ ಬದಲಾವಣೆಗೆ ವಿದ್ಯಾರ್ಥಿನಿಯರು ತೀವ್ರ ಹೋರಾಟ ನಡೆಸಿದ್ದರು. ಬಾಲಕಿಯರ ವಸತಿ ಶಾಲೆಯ 8 ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಈ ವೇಳೆ ಹಾಸನ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬಾಲಕಿಯರನ್ನು ವಿಚಾರಣೆ ನಡೆಸಿದಾಗ ಮಕ್ಕಳ ಮೇಲಿನ ದೌರ್ಜನ್ಯ ಬಯಲಾಗಿದೆ.
ಮಹಿಳಾ ಜಡ್ಜ್‌ಗೇ ಮೋಸ: ವಿರೂಪ ಮಾಡಿದ ಚಿತ್ರ ಕಳುಹಿಸಿ 20 ಲಕ್ಷ ರು. ಸುಲಿಗೆಗೆ ಯತ್ನ
undefined
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹೆಣ್ಣು ಮಕ್ಕಳ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮಕ್ಕಳ ಪ್ರತಿಭಟನೆ ಬಳಿಕ ವಿಚಾರಣೆ ನಡೆಸಿದಾಗ ಮಕ್ಕಳ ಮೇಲಿನ ಕ್ರೌರ್ಯ ಬಹಿರಂಗವಾಗಿದೆ. ಹಳೆಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಾಂಶುಪಾಲರು ಸೇರಿ ಐವರ ವಿರುದ್ದ ಜಾತಿ ದೌರ್ಜನ್ಯ ಮತ್ತು ಪೋಕ್ಸೋ ಕಾಯ್ದೆಯಡಿ ದೂರು ದಾಖಲು ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಭಯೋತ್ಪಾದನಾ ಕೃತ್ಯಕ್ಕೆ ದ.ಕ.ದಿಂದ 25 ಕೋಟಿ ರು. ವರ್ಗಾವಣೆ?