ಲೈಂಗಿಕ ಕಿರುಕುಳಕ್ಕೆ ಬೇಸತ್ತು ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ನಡೆದಿದೆ.
ಬಂಟ್ವಾಳ (ನ.11): ಲೈಂಗಿಕ ಕಿರುಕುಳಕ್ಕೆ ಬೇಸತ್ತು ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ನಡೆದಿದೆ. ಬೈಲೂರು ಮೂಲದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾರ್ಥಿನಿ ಆತ್ಮಹತ್ಯೆ ಹಿನ್ನೆಲೆ ಕಾಲೇಜಿನ ನಿವೃತ್ತ ಕ್ಲರ್ಕ್ ಶ್ರೀಧರ್ ಪುರಾಣಿಕ್(62) ಎಂಬಾತನನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿಗೆ ಕಿವಿ ನೋವಿದ್ದ ಕಾರಣ ಕಾಲೇಜಿನ ಪ್ರಿನ್ಸಿಪಾಲ್ ಆಕೆಯ ಅತ್ತೆಗೆ ಮಾಹಿತಿ ನೀಡಿದ್ದರು. ಹೀಗಾಗಿ ವಿದ್ಯಾರ್ಥಿನಿಯ ಅತ್ತೆ ಮನೆಗೆ ಕರೆದುಕೊಂಡು ಬರಲು ಪರಿಚಿತ ಶ್ರೀಧರ್‌ನನ್ನ ಕಳುಹಿಸಿದ್ದರು. ಕಾರಿನಲ್ಲಿ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಶ್ರೀಧರ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಇದರಿಂದ ನೊಂದ ವಿದ್ಯಾರ್ಥಿನಿ ಶ್ರೀಧರ್ ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಮನೆ ಪಕ್ಕದ ಹಾಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಬಾಲಕಿ 17 ವರ್ಷದ ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ಆರೋಪಿ ಪುರಾಣಿಕ್ ವಿರುದ್ಧ ಪೋಕ್ಸೋ ಮತ್ತು ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆರೋಪಿ ಪುರಾಣಿಕ್ ಮನೆಯಲ್ಲಿ ವಿದ್ಯಾರ್ಥಿನಿಯ ಪೋಷಕರು ಕೆಲಸ ಮಾಡುತ್ತಿದ್ದು, ಕೆಲಸದ ಒತ್ತಡದಿಂದ ಖುದ್ದಾಗಿ ಹೋಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಬಾಲಕಿಯನ್ನು ಕಾಲೇಜಿನಿಂದ ಕರೆತರುವಂತೆ ಶ್ರೀಧರ್ ಗೆ ಹೇಳಿದ್ದರು. ಬಾಲಕಿಯ ಶಾಲಾ ಶುಲ್ಕವನ್ನು ಶ್ರೀಧರ್ ಪಾವತಿಸಿದ್ದ ಎಂದು ಮೂಲಗಳು ತಿಳಿಸಿವೆ.
ಬೀದರ್: ಆನ್ಲೈನ್‌ನಲ್ಲಿ ಮೋಸ, ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ
ವಿದ್ಯಾರ್ಥಿನಿಯರಿಗೆ ಕಿರುಕುಳ, ದೈಹಿಕ ಶಿಕ್ಷಕನ ಬಂಧನ
ಬೆಂಗಳೂರು (ನ.11): ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕನೊಬ್ಬನನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ ಎಂಟು ತಿಂಗಳಿಂದ ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ 54 ವರ್ಷದ ಶಿಕ್ಷಕ ಕಾರ್ಯನಿರ್ವಹಿಸುತ್ತಿದ್ದು, ಆ ಶಾಲೆಯ ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ.
ಕಾಸರಗೋಡಿನ ವೈದ್ಯ ನಿಗೂಢ ಸಾವು: ಕೇರಳ ಪೊಲೀಸರಿಂದ ಐವರ ಬಂಧನ
ಹಲವು ದಿನಗಳಿಂದ ಶಾಲಾ ಅವಧಿಯಲ್ಲಿ ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ದೈಹಿಕ ಶಿಕ್ಷಣ ಶಿಕ್ಷಕ ನಡೆದುಕೊಳ್ಳುತ್ತಿದ್ದ. ಅನಗತ್ಯವಾಗಿ ತನ್ನ ಕೊಠಡಿಗೆ ಕರೆಸಿಕೊಂಡು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ. ಈ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿಯರು, ಶಾಲೆಯ ಪ್ರಾಂಶುಪಾಲರಿಗೆ ದೂರು ಸಲ್ಲಿಸಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಪ್ರಾಂಶುಪಾಲರು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಬಳಿಕ ಹೆಬ್ಬಾಳ ಠಾಣೆಗೆ ತೆರಳಿ ಪ್ರಾಂಶುಪಾಲರು ದೂರು ಸಲ್ಲಿಸಿದ್ದಾರೆ. ಈ ದೂರಿನ ಮೇರೆಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಮಂಗಳವಾರ ರಾತ್ರಿಯನ್ನು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.