ಶಿಕಾರಿಪುರ ತಾಲೂಕಿನ ಸೊಪ್ಪಿನಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕಳ ನೀಡಿದ ಆರೋಪದಡಿ ಅದೇ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ (ಡಿ.10) : ಶಿಕಾರಿಪುರ ತಾಲೂಕಿನ ಸೊಪ್ಪಿನಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕಳ ನೀಡಿದ ಆರೋಪದಡಿ ಅದೇ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ.
ಶಾಲೆಯ ಮುಖ್ಯಶಿಕ್ಷಕ ನಾಗರಾಜ್, ಸಹಶಿಕ್ಷಕ ಶಾಂತಕುಮಾರ್ ಅಮಾನತುಗೊಂಡ ಶಿಕ್ಷಕರು. ಶಾಲೆಯಲ್ಲಿ ಹಲವು ದಿನದಿಂದಲೂ ಶಿಕ್ಷಕರೊಬ್ಬರು ಕೆಟ್ಟ ಮನಸ್ಥಿತಿಯಲ್ಲಿ ವಿದ್ಯಾರ್ಥಿನಿಯರನ್ನು ಸ್ಪರ್ಶಿಸುವುದು, ಅವರೊಂದಿಗೆ ಕೆಟ್ಟದಾಗಿ ನಡೆದುಕೊಳ್ಳುವುದು ಮಾಡುತ್ತಿದ್ದಾರೆಂದು, ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂದು ಶಾಲೆಯ ಶಿಕ್ಷಕಿಯರ ಬಳಿ ಮಕ್ಕಳು ತಮ್ಮ ಅಳಲು ತೋಡಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ.
undefined
ಯುವತಿಯರು ಲೈಂಗಿಕ ಕಾಮನೆ ನಿಯಂತ್ರಿಸಿಕೊಳ್ಳಬೇಕು ಎಂದಿದ್ದ ಕೋಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಛೀಮಾರಿ!
ಈ ಬಗ್ಗೆ ಮುಖ್ಯಶಿಕ್ಷಕರ ಗಮನಕ್ಕೆ ತರಲಾಗಿತ್ತು. ಆದರೂ, ಸಹಾಯಕ ಶಿಕ್ಷಕ ಶಾಂತಕುಮಾರ್ ವಿರುದ್ಧ ಮುಖ್ಯಶಿಕ್ಷಕ ನಾಗರಾಜ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಮುಖ್ಯಶಿಕ್ಷಕರ ವರ್ತನೆ ವಿರುದ್ಧ ಪೋಷಕರು ಅಸಮಾಧಾನ ಹೊರಹಾಕಿದ್ದರು. ಬಳಿಕ ಪೋಷಕರು, ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿ ವಲಯದಲ್ಲಿ ತೀವ್ರ ಚರ್ಚೆ, ಪ್ರತಿರೋಧದ ನಂತರ ಡಿ. 2ರಂದು ಮುಖ್ಯಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಮಾಹಿತಿ ನೀಡಿದ್ದರು. ಇದಾದ ಬಳಿಕ ಡಿ. 4ರಂದು ಮುಖ್ಯಶಿಕ್ಷಕರು 29 ಪುಟಗಳ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಿದ್ದರು.
ಡಿ. 5ರಂದು ಕ್ಷೇತ್ರ ಶಿಕ್ಷಣಾಧಿಕಾರಿ, ವಿವಿಧ ಅಧಿಕಾರಿಗಳ ತಂಡದೊಂದಿಗೆ ತೆರಳಿ ಮಕ್ಕಳಿಂದ, ಶಿಕ್ಷಕರಿಂದ ಪ್ರತ್ಯೇಕವಾಗಿ ಮಾಹಿತಿ ಪಡೆದು, 15 ಪುಟಗಳ ವರದಿ ಸಿದ್ಧಪಡಿಸಿದ್ದರು. ಡಿ. 6ರಂದು ಪೊಲೀಸ್ ಅಧಿಕಾರಿಗಳು ಬೆಳಗ್ಗೆ ಶಾಲೆಗೆ ತೆರಳಿ ಘಟನೆ ಕುರಿತು ಶಿಕ್ಷಕರು, ಮುಖ್ಯಶಿಕ್ಷಕರು, ಸಂತ್ರಸ್ತ ವಿದ್ಯಾರ್ಥಿಗಳ ಬಳಿ ಮಾಹಿತಿ ಪಡೆದು ಜಿಲ್ಲಾಮಟ್ಟದ ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ನೀಡಿದ್ದರು. ಡಿ. 8ರಂದು ಶಾಲೆಗೆ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಸಮಾಲೋಚನೆ ನಡೆಸಿದ್ದರು.
ನಮ್ಮ ಮೆಟ್ರೋ: ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿ ಮೆಟ್ರೋ ಭದ್ರತಾ ಸಿಬ್ಬಂದಿ
ಈ ಇಬ್ಬರು ಶಿಕ್ಷಕರ ಮೇಲೆ ವಿದ್ಯಾರ್ಥಿನಿಯರಿಗೆ ಲೈಗಿಂಕ ಕಿರುಕುಳ ನೀಡುತ್ತಿರುವ ಬಗ್ಗೆ ಅಪಾದನೆ ಕೇಳಿಬಂದ ಹಿನ್ನೆಲೆ ಬ್ಲಾಕ್ ಶಿಕ್ಷಣಾಧಿಕಾರಿ ಡಿಡಿಪಿಐಗೆ ವರದಿ ಸಲ್ಲಿಸಿದ್ದರು. ವರದಿ ಪರಿಶೀಲಿಸಿದ ಉಪನಿರ್ದೇಶಕ ಪರಮೇಶ್ವರಪ್ಪ ಅವರು ಸಂಬಂಧಪಟ್ಟ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.