
ಯಾದಗಿರಿ (ಜ.12): ಶಾಲೆಯ ಮುಖ್ಯ ಶಿಕ್ಷಕನಿಂದಲೇ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಗುರುಮಠಕಲ್ ಠಾಣೆಯಲ್ಲಿ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಲಾಗಿದೆ.
ಹಣಮೇಗೌಡ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ. ಆರೋಪಿ ಯಾದಗಿರಿ ಜಿಲ್ಲೆಯ ಸರಕಾರಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕನಾಗಿದ್ದಾನೆ. ಕಳೆದ 4 ವರ್ಷದಿಂದ ಶಾಲೆಯ ಮುಖ್ಯ ಶಿಕ್ಷಕನಾಗಿರುವ ಆರೋಪಿ ಹಣಮೇಗೌಡ. ಶಾಲೆಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತಿಸುವುದು, ಲೈಂಗಿಕ ಕಿರುಕುಳ ನೀಡುವುದು ಕೆಲಸ ಮಾಡಿಕೊಂಡ ಕಾಮುಕ. ಹಲವು ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಆರೋಪ ಕೇಳಿಬಂದಿದೆ.
ದಿನನಿತ್ಯ ಕುಡಿದು ಬಂದು ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ; ಕಾಮುಕ ಶಿಕ್ಷಕನ ವರ್ಗಾವಣೆಗೆ ಗ್ರಾಮಸ್ಥರು ಪಟ್ಟು!
ಈಗಾಗಲೇ ಅನುಚಿತ ವರ್ತನೆ ಆರೋಪದಡಿ ಮುಖ್ಯ ಶಿಕ್ಷಕ ಹಣಮೇಗೌಡನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರೋ ಸಿಇಓ ಗರೀಮಾ ಪನ್ವಾರ್. ಬಳಿಕ ನಾಲ್ಕು ಜನ ಶಿಕ್ಷಣ ಇಲಾಖೆ ಅಧಿಕಾರಿಗಳ ತಂಡ ಶಾಲೆ ಭೇಟಿ ನೀಡಿ ಮಕ್ಕಳ ವಿಚಾರಣೆ ನಡೆಸಿದ್ದರು. ಅಧಿಕಾರಿಗಳ ಭೇಟಿ ವೇಳೆ ಶಾಲೆಯ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ನೀಡಿದ್ದ ಮಾಹಿತಿ ನೀಡಿದ್ದಾರೆ. ಪರಿಶೀಲನೆ ವರದಿಯು ನಿಜವೆಂದು ತಿಳಿದು ಯಾದಗಿರಿ ಡಿಡಿಪಿಐ ಮಂಜುನಾಥ ಎಚ್‌ಟಿ ಅವರು ಪೋಕ್ಸೊ ಅಡಿ ಶಿಕ್ಷಕ ಹಣಮೇಗೌಡ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ವಿಚಾರಣೆ ನಡೆಸುತ್ತಿರುವ ಪೊಲೀಸರು.
ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಅಸಹ್ಯವಾಗಿ ಮುಟ್ತಿದ್ದ ಕಾಮುಕ ಶಿಕ್ಷಕ: ಪೋಷಕರಿಂದ ಧರ್ಮದೇಟು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ