Sexual harassment : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕ ಅಮಾನತು 

By Ravi JanekalFirst Published Dec 16, 2022, 10:55 PM IST
Highlights

 ಪಾಂಡವಪುರ ತಾಲ್ಲೂಕಿನ ಕಟ್ಟೇರಿ ಗ್ರಾಮದ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವಸತಿ ಶಾಲೆಯ ಉಸ್ತುವಾರಿ ಹಾಗೂ ಮುಖ್ಯ ಶಿಕ್ಷಕನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಪಾಂಡವಪುರ (ಡಿ.16) : ಪಾಂಡವಪುರ ತಾಲ್ಲೂಕಿನ ಕಟ್ಟೇರಿ ಗ್ರಾಮದ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವಸತಿ ಶಾಲೆಯ ಉಸ್ತುವಾರಿ ಹಾಗೂ ಮುಖ್ಯ ಶಿಕ್ಷಕನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅಮಾನತುಗೊಳಿಸಿ ಆದೇಶಿಸಿದ್ದಾರೆ. 

ಕಟ್ಟೇರಿ ಗ್ರಾಮದಲ್ಲಿರುವ ಪ್ರೌಡಶಾಲಾ ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ವಸತಿ ನಿಲಯದ ಉಸ್ತುವಾರಿ ಹೊತ್ತಿದ್ದ ಮುಖ್ಯಶಿಕ್ಷಕ ಚಿನ್ಮಯಾನಂದ ಮೂರ್ತಿ ವಿದ್ಯಾರ್ಥಿನಿಯರಿಂದ ಥಳಿತಕ್ಕೊಳಗಾಗಿ ಪೊಲೀಸರ ಅತಿಥಿಯಾಗಿದ್ದರು. 

Mandya: ಶಿಕ್ಷಕನಿಂದ ಲೈಂಗಿಕ ಕಿರುಕುಳ, ಬೇಸತ್ತ ವಿದ್ಯಾರ್ಥಿನಿಯರಿಂದ ಧರ್ಮದೇಟು

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಟಿ. ಜವರೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಖ್ಯ ಶಿಕ್ಷಕನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಘಟನೆ ವಿವರ ಪಡೆದು ಮುಖ್ಯ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. 

ವಿದ್ಯಾರ್ಥಿನಿಯರು ನೀಡಿದ ದೂರಿನ ಮೇರೆಗೆ  ಶಿಕ್ಷಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿ ಶಿಕ್ಷಕನನ್ನು ವಿಚಾರಣೆಗೊಳಪಡಿಸಿದ್ದಾರೆ. ಕಾಮುಕ ಮುಖ್ಯಶಿಕ್ಷಕನನ್ನು ಕೆಲಸದಿಂದ ವಜಾ ಗೊಳಿಸಲು ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.  

ಕತ್ತರಿಯಿಂದ ಹಲ್ಲೆ ಮಾಡಿ ಬಾಲಕಿಯನ್ನು ಮೊದಲ ಮಹಡಿಯಿಂದ ಎಸೆದ ಶಿಕ್ಷಕಿ

ಮುಖ್ಯ ಶಿಕ್ಷಕನನ್ನು ಕೆ.ಆರ್.ಎಸ್.ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಶಿಕ್ಷಕನ ಅಮಾನತಿನಿಂದ ವಸತಿ ನಿಲಯದ ವಿದ್ಯಾರ್ಥಿನಿರು ನಿಟ್ಟುಸಿರು ಬಿಟ್ಟಿದ್ದಾರೆ.

click me!