Shivamogga: ಬಾಲಕಿಗೆ ಲೈಂಗಿಕ ಕಿರುಕುಳ: ಯುವಕನಿಗೆ 20 ವರ್ಷ ಜೈಲು ಶಿಕ್ಷೆ

By Govindaraj S  |  First Published Jan 7, 2023, 9:48 AM IST

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ 19 ವರ್ಷದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ.


ಶಿವಮೊಗ್ಗ (ಜ.07): ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ 19 ವರ್ಷದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು.

ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್‌ಟ್ರ್ಯಾಕ್‌ ವಿಶೇಷ ನ್ಯಾಯಾಲಯದ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ.ಜೆ.ಎಸ್‌.ಮೋಹನ್‌ ಅವರು ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರು. ದಂಡ ವಿಧಿಸಿದ್ದು, ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಸಾದಾ ಶಿಕ್ಷೆ ನೀಡಿ ಆದೇಶ ಹೊರಡಿಸಲಾಗಿದೆ. ಸರ್ಕಾರಿ ಅಭಿಯೋಜಕರಾಗಿ ಹರಿಪ್ರಸಾದ್‌ ವಾದ ಮಂಡಿಸಿದ್ದರು.

Tap to resize

Latest Videos

ಜನಾರ್ದನ ರೆಡ್ಡಿ ಸಾಮಾಜಿಕ ಜಾಲತಾಣಗಳ ಖಾತೆ ಹ್ಯಾಕ್: ದೂರು ದಾಖಲು

ಲೈಂಗಿಕ ದೌರ್ಜನ್ಯ ಆರೋಪಿಗೆ 20 ವರ್ಷ ಜೈಲು: 8 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿ​ಸಿದೆ. ಯಳಂದೂರು ಪಟ್ಟಣ ನಿವಾಸಿ ಮಹೇಶ್‌(38) ಶಿಕ್ಷೆಗೊಳಗಾದ ಅಪರಾ​ಧಿ. ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾ​ಧೀಶೆ ಎ.ಸಿ.ನಿಶಾರಾಣಿ ಶಿಕ್ಷೆ ವಿ​ಧಿಸಿ ಆದೇಶ ನೀಡಿದ್ದಾರೆ. ಜೊತೆಗೆ, 15 ಸಾವಿರ ರು. ದಂಡ ವಿ​ಧಿಸಿದ್ದಾರೆ. ಕಾನೂನು ಸೇವಾ ಪ್ರಾ​ಧಿಕಾರವು ಸಂತ್ರಸ್ಥ ಬಾಲಕಿಗೆ 4 ಲಕ್ಷ ರು. ಪರಿಹಾರ ಕೊಡುವಂತೆ ಸೂಚಿಸಿದೆ. 

2019 ರಲ್ಲಿ ಮನೆಯಲ್ಲಿ ಮಗಳೊಟ್ಟಿಗೆ 8 ವರ್ಷದ ಬಾಲಕಿ ಟಿವಿ ನೋಡುತ್ತಿದ್ದಾಗ ಬಂದ ಈ ಮಹೇಶ್‌ ಮಗಳನ್ನು ಹೊರಗಡೆ ಕಳುಹಿಸಿ ಸಂತ್ರಸ್ಥೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದ, ಬಳಿಕ ಬಾಲಕಿ ವರ್ತನೆಯಿಂದ ಮಹೇಶನ ಕಾಮುಕತೆ ಬೆಳಕಿಗೆ ಬಂದಿತ್ತು. ಘಟನೆ ಸಂಬಂಧ ಯಳಂದೂರು ಠಾಣೆಯಲ್ಲಿ ಪ್ರಕರಣವು ದಾಖಲಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಯೋಗೇಶ್‌ ವಾದ ಮಂಡಿಸಿದ್ದರು. ಯಳಂದೂರು ಸಿಪಿಐ ಎ.ಕೆ. ರಾಜೇಶ್‌ ದೋಷರೋಪಣ ಪತ್ರ ಸಲ್ಲಿಸಿದ್ದರು.

ಚೆಕ್‌ ಬೌನ್ಸ್‌ ಕೇಸು ಇತ್ಯರ್ಥಕ್ಕೆ 10 ಲಕ್ಷ ತಂದಿದ್ದೆ: ಪಿಡಬ್ಲ್ಯುಡಿ ಎಂಜಿನಿಯರ್‌ ಜಗದೀಶ್‌

ಶಿಕ್ಷಕನ ವಿರುದ್ಧ ದೂರು: ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ ವಿದ್ಯಾರ್ಥಿನಿಗಳ ಜೊತೆ ಶಿಕ್ಷಕನೊಬ್ಬ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಶಿಕ್ಷಕನ ವಿರುದ್ಧ ಸಂಕೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಶಾಲೆಯ ಶಿಕ್ಷಕ ಬಿ.ಆರ್‌.ಬಾಡಕರ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಡಿ.23ರಂದು ವಿದ್ಯಾರ್ಥಿನಿಯರು ದೂರು ನೀಡಿದ್ದರು. ಶಿಕ್ಷಕ ಬಿ.ಆರ್‌.ಬಾಡಕರ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುವುದು ಹಾಗೂ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಈ ವಿಷಯ ಯಾರಿಗಾದರೂ ಹೇಳಿದರೆ ಆಂತರಿಕ ಅಂಕ ಕಡಿತಗೊಳಿಸುವ ಬೆದರಿಕೆ ಹಾಕಿದ್ದಾರೆ. ಇನ್ನು ಶಿಕ್ಷಕನ ಈ ಕೃತ್ಯಕ್ಕೆ ಮತ್ತೊರ್ವ ಶಿಕ್ಷಕ ಸಹಕರಿಸಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಆರೋಪಿತರ ಮೇಲೆ ದೂರು ದಾಖಲಿಸಲಾಗಿದೆ.

click me!