ಕಾರು ಚಾಲಕನೋರ್ವ ಮಹಿಳೆಯ ನಗ್ನ ಚಿತ್ರಗಳನ್ನು ರೆಕಾರ್ಡ್ ಮಾಡಿಕೊಂಡು ಲೈಂಗಿಕ ಕಿರುಕುಳ, ಹಣಕ್ಕೆ ಬೇಡಿಕೆ ಇಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಹೊರವಲಯದ ಕಾರು ಚಾಲಕ ಮಂಜು ಎಂಬಾತನ ವಿರುದ್ಧ ಸೈಬರ್ ಠಾಣೆಯಲ್ಲಿ ದೂರು ನೀಡಿದ ಸಂತ್ರಸ್ತ ಮಹಿಳೆ.
ಶಿವಮೊಗ್ಗ (ಡಿ.15): ಕಾರು ಚಾಲಕನೋರ್ವ ಮಹಿಳೆಯ ನಗ್ನ ಚಿತ್ರಗಳನ್ನು ರೆಕಾರ್ಡ್ ಮಾಡಿಕೊಂಡು ಲೈಂಗಿಕ ಕಿರುಕುಳ, ಹಣಕ್ಕೆ ಬೇಡಿಕೆ ಇಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಹೊರವಲಯದ ಕಾರು ಚಾಲಕ ಮಂಜು ಎಂಬಾತನ ವಿರುದ್ಧ ಸೈಬರ್ ಠಾಣೆಯಲ್ಲಿ ದೂರು ನೀಡಿದ ಸಂತ್ರಸ್ತ ಮಹಿಳೆ.
ಘಟನೆ ಹಿನ್ನೆಲೆ ಏನು?
ಕಳೆದ ವರ್ಷ ಭದ್ರಾವತಿ ಮೂಲದ ಮಹಿಳೆಯ ಕುಟುಂಬದವರು ದೇವಸ್ಥಾನಕ್ಕೆ ಕಾರು ಬಾಡಿಗೆ ಪಡೆದಿದ್ದರು. ಆ ಕಾರಿನ ಚಾಲಕನಾಗಿದ್ದ ಮಂಜು ಮಹಿಳೆಯ ಮೊಬೈಲ್ ನಂಬರ್ ಪಡೆದಿದ್ದ. ಮಹಿಳೆ ಆತನೊಂದಿಗೆ ಸಲುಗೆಯೊಂದಿಗೆ ಮಾತನಾಡುತ್ತಿದ್ದಳು. ಈ ವೇಳೆ ವಿಡಿಯೋ ಕಾಲ್ ನಲ್ಲಿ ಮಾತನಾಡುವಾಗ ಮಹಿಳೆ ನಗ್ನವಾಗಿದ್ದನ್ನು ಆತ ರೆಕಾರ್ಡ್ ಮಾಡಿಕೊಂಡಿದ್ದ. ಬಳಿಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದ ಅಷ್ಟೇ ಅಲ್ಲ ನಗ್ನ ವಿಡಿಯೋ ಇಟ್ಟುಕೊಂಡು 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದ.
ಬೆಂಗಳೂರಲ್ಲಿ ರಾಪಿಡೋ ಹತ್ತಿದ ಯುವತಿಗೆ ಲೈಂಗಿಕ ಕಿರುಕುಳ, ವಿರೋಧಿಸಿದ್ದಕ್ಕೆ ಹೊರದಬ್ಬಿದ ಚಾಲಕ!
ಆದರೆ ಕೊಡಲು ನಿರಾಕರಿಸಿದ್ದಕ್ಕೆ ಆಕೆಯ ಗಂಡನ ಮೊಬೈಲ್‌ಗೆ ಪತ್ನಿಯ ನಗ್ನ ವಿಡಿಯೋ ಕಳುಹಿಸಿದ್ದ. ಅಲ್ಲದೆ ಮಹಿಳೆ ಹಣ ಕೊಡಲು ಒಪ್ಪದಿದ್ದಾಗ ಸಂಬಂಧಿಕರಿಗೂ ವಿಡಿಯೋ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಮಹಿಳೆ ಶಿವಮೊಗ್ಗ ಸೈಬರ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಿಕೊಂಡ ಪೊಲೀಸರು.
ಬಳ್ಳಾರಿ ವಿಮ್ಸ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ನಿರ್ದೇಶಕ ಗಂಗಾಧರ ಗೌಡ ವಿರುದ್ಧ ಎಫ್‌ಐಆರ್