
ಗಂಗಾವತಿ (ಸೆ.03): ಇನ್‌ಸ್ಟಾಗ್ರಾಮ್‌ನಲ್ಲಿ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯನ್ನು ಫೋಕ್ಸೋ ಕಾಯ್ದೆಯಡಿಯಲ್ಲಿ ಪೊಲೀಸರು ಶನಿವಾರ ತಡ ರಾತ್ರಿ ಬಂಧಿಸಿದ್ದಾರೆ. ನಗರದ ಪ್ಯಾರಾಮೆಡಿಕಲ್ ವಿದ್ಯಾರ್ಥಿ ವಡ್ಡರಹಟ್ಟಿಯ ಮುಸ್ತಾಫ್ (18) ಎನ್ನುವಾತ ಬಂಧಿತ.
ಈ ವಿದ್ಯಾರ್ಥಿ ವೆಂಕಟಗಿರಿ ಗ್ರಾಮದ 17 ವರ್ಷದ ಬಾಲಕಿಗೆ ಪದೇ ಪದೇ ಇನ್‌ಸ್ಟಾಗ್ರಾಮ್‌ನಲ್ಲಿ ಲೈಂಗಿಕ ಚಿತ್ರಗಳನ್ನು ತೋರಿಸುವಂತೆ ಒತ್ತಾಯಿಸಿ ಕಿರಕುಳ ನೀಡುತ್ತಿದ್ದ. ಇದಕ್ಕೆ ಬೇಸತ್ತ ಬಾಲಕಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
ಆಸ್ಪತ್ರೆಯಲ್ಲಿ ಬಾಲಕಿ ಪರಿಚಯ: ವೆಂಕಟಗಿರಿ ಗ್ರಾಮದ 17 ವರ್ಷದ ಬಾಲಕಿ ಗಂಗಾವತಿ ಸರಕಾರಿ ಆಸ್ಪತ್ರೆಯಲ್ಲಿ ಬಾಲಕಿ ತಂದೆ ಚಿಕಿತ್ಸೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಮುಸ್ತಾಫ್‌ಗೆ ಪರಿಚಯವಾಗಿದ್ದಾಳೆ. ಮುಸ್ತಾಫ್ ಪ್ಯಾರಾಮೆಡಿಕಲ್ ಶಿಕ್ಷಣ ಪಡೆಯುತ್ತಿದ್ದರಿಂದ ದಿನ ನಿತ್ಯ ಸರಕಾರಿ ಆಸ್ಪತ್ರೆಗೆ ಹೋಗುತ್ತಿದ್ದಾಗ ವಾರ್ಡಿನಲ್ಲಿದ್ದ ಬಾಲಕಿ ಪರಿಚಯವಾಗಿ ಮೊಬೈಲ್ ನಂಬರ್ ಪಡೆದಿದ್ದಾನೆ.
ಕಾವೇರಿ ವಿಚಾರಕ್ಕೆ ನಿಮ್ಮ ಜೊತೆ ಜೈಲಿಗೆ ಬರಲು ಸಿದ್ಧ: ಶಾಸಕ ಜಿ.ಟಿ.ದೇವೇಗೌಡ
ನಂತರ ದಿನ ನಿತ್ಯ ಮೆಸೇಜ್ ಮಾಡುತ್ತಾ ಹೋಗಿ ನಂತರ ಬಾಲಕಿಗೆ ನೀನು ಸ್ನಾನ ಮಾಡುವಾಗ ವಿಡೀಯೋ ತೋರಿಸು ಎಂದು ಒತ್ತಾಯಿಸಿದ್ದಾನೆ. ಈ ಸಂದರ್ಭದಲ್ಲಿ ವೀಡಿಯೋ ರೆಕಾರ್ಡ್ ಮಾಡಿಕೊಂಡ ನೀನು ನನ್ನ ಬಳಿ ಬರದಿದ್ದರೆ ನಿನ್ನ ವಿಡಿಯೋ ವೈರಲ್ ಮಾಡುತ್ತೇನೆ ಎಂದು ಬ್ಲಾಕ್‌ಮೇಲ್ ಮಾಡಿದ್ದಾನೆ. ಇದಕ್ಕೆ ರೋಸಿ ಹೋಗಿದ್ದ ಬಾಲಕಿ ತನ್ನ ತಂದೆಗೆ ತಿಳಿಸಿ ನೇರವಾಗಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾಳೆ. ಇದರ ವಿಚಾರಣೆ ನಡೆಸಿದ ಪೊಲೀಸರು ಮುಸ್ತಾಫ್‌ನನ್ನು ಫೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ