
ಚಿಕ್ಕಮಗಳೂರು(ಮಾ.01): ಅಥ್ಲೆಟಿಕ್ ತರಬೇತುದಾರನೊಬ್ಬ ಅಪ್ರಾಪ್ತ ಕ್ರೀಡಾಪಟುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಸಂಬಂಧ ಸಂತ್ರಸ್ತೆ ಕ್ರೀಡಾಪಟು ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಅವರಿಗೆ ದೂರು ಸಲ್ಲಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ಭರತ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಲಾಗಿದೆ. ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಬಿಹಾರದ ಪಾಟ್ನಾದಲ್ಲಿ ಆಯೋಜನೆ ಮಾಡಿದ್ದ ಕ್ರೀಡಾಕೂಟದಲ್ಲಿ ಭಾಗಿಯಾದ ವೇಳೆ ಈ ಘಟನೆ ನಡೆದಿದೆ.
ಅಂತರ್ಜಾತಿ ವಿವಾಹ ಆಗಿದ್ದ ಯುವತಿ ನೇಣಿಗೆ ಶರಣು: ಕುಟುಂಬಸ್ಥರಿಂದ ಭಾರೀ ಕಿರುಕುಳ
ಫೆ.15ರಂದು ಕ್ರೀಡಾಕೂಟ ಮುಗಿಸಿ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಸ್ಸಿನಲ್ಲಿ ಬರುವಾಗ ಕೃತ್ಯ ನಡೆದಿದ್ದು, ಆರೋಪಿ ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆರೋಪಿ ಎಸ್.ಭರತ್ ಜಿಲ್ಲಾ ಯುವ ಸಬಲೀಕರಣ, ಕ್ರೀಡಾ ಇಲಾಖೆಯಲ್ಲಿ ಅಥ್ಲೆಟಿಕ್ಸ್ ತರಬೇತುದಾರರಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ