ಬೆಂಗಳೂರು: ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ?

By Kannadaprabha News  |  First Published Nov 23, 2023, 6:45 AM IST

ಸೋಮವಾರ ಬೆಳಗ್ಗೆ ಸುಮಾರು 8.30ಕ್ಕೆ ಯುವತಿ ಕಾಲೇಜಿಗೆ ಪ್ರಯಾಣಿಸಲು ಮೆಜೆಸ್ಟಿಕ್‌ಗೆ ಬಂದಿದ್ದಳು. ಮೆಟ್ರೋ ಏರುವಾಗ ದಟ್ಟಣೆ ಯಿತ್ತು. ರೈಲು ಏರಿದ ಮೇಲೆ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಆರಂಭದಲ್ಲಿ ಆಕೆಗೆ ಏನಾಗುತ್ತಿದೆ ಎಂಬ ಅರಿವು ಇರಲಿಲ್ಲ. ಮುಂದಕ್ಕೆ ತೆರಳಿ ಸಹಾಯಕ್ಕೆ ಕೋರಿದ್ದರೂ ಮೆಟ್ರೋ ಪ್ರಯಾಣಿಕರು ನೆರವಿಗೆ ಬಂದಿರಲಿಲ್ಲ’ ಎಂದು ರೆಡಿಟ್‌ನಲ್ಲಿ ಸ್ನೇಹಿತರು ಬರೆದುಕೊಂಡಿದ್ದಾರೆ.


ಬೆಂಗಳೂರು(ನ.23):  ಇತ್ತೀಚೆಗೆ ಮೆಜೆಸ್ಟಿಕ್‌ ನಿಲ್ದಾಣದಿಂದ ಮೆಟ್ರೋ ರೈಲು ಹತ್ತಿದ ಯುವತಿಗೆ ಲೈಂಗಿಕ ಕಿರುಕುಳವಾಗಿದೆ ಎಂದು ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಂಬಂಧ ಉಪ್ಪಾರಪೇಟೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

‘ಸೋಮವಾರ ಬೆಳಗ್ಗೆ ಸುಮಾರು 8.30ಕ್ಕೆ ಯುವತಿ ಕಾಲೇಜಿಗೆ ಪ್ರಯಾಣಿಸಲು ಮೆಜೆಸ್ಟಿಕ್‌ಗೆ ಬಂದಿದ್ದಳು. ಮೆಟ್ರೋ ಏರುವಾಗ ದಟ್ಟಣೆ ಯಿತ್ತು. ರೈಲು ಏರಿದ ಮೇಲೆ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಆರಂಭದಲ್ಲಿ ಆಕೆಗೆ ಏನಾಗುತ್ತಿದೆ ಎಂಬ ಅರಿವು ಇರಲಿಲ್ಲ. ಮುಂದಕ್ಕೆ ತೆರಳಿ ಸಹಾಯಕ್ಕೆ ಕೋರಿದ್ದರೂ ಮೆಟ್ರೋ ಪ್ರಯಾಣಿಕರು ನೆರವಿಗೆ ಬಂದಿರಲಿಲ್ಲ’ ಎಂದು ರೆಡಿಟ್‌ನಲ್ಲಿ ಸ್ನೇಹಿತರು ಬರೆದುಕೊಂಡಿದ್ದಾರೆ.

Tap to resize

Latest Videos

ಡಿಸಿಪಿ ಕಚೇರಿ ಮುಂಭಾಗವೇ ನಡೆಯಿತು ಯುವತಿ ಮೇಲೆ ದೌರ್ಜನ್ಯ; ಬಟ್ಟೆ ಹಿಡಿದು ಎಳೆದಾಡಿ ಕಾಮುಕ ಎಸ್ಕೇಪ್!

ಸಿಸಿ ಕ್ಯಾಮೆರಾ ಪರಿಶೀಲನೆ: 

ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್‌, ಮೆಟ್ರೋದಲ್ಲಿ ದಟ್ಟಣೆ ಅವಧಿಯಲ್ಲಿ ಮಹಿಳಾ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಘಟನೆ ಕುರಿತು ಇದುವರೆಗೂ ಯಾರೂ ದೂರು ನೀಡಿಲ್ಲ. ಈಗಾಗಲೇ ನಾವು ಸಿಸಿ ಟಿ.ವಿ ಕ್ಯಾಮೆರಾ ಪರಿಶೀಲನೆ ಆರಂಭಿಸಿದ್ದೇವೆ. ಮಹಿಳೆಯರು ಆದ್ಯತೆ ಮೇರೆಗೆ ಮಹಿಳಾ ಬೋಗಿಯಲ್ಲಿ ಸಂಚರಿಸಿ ಎಂದು ಹೇಳಿದ್ದಾರೆ.

click me!