ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ ಹೀಗಾಗಿ ನಾಳೆ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಬೆಂಗಳೂರು (ಜು.22): ಅಸಹಜ ಲೈಂಗಿಕ ದೌರ್ಜನ್ಯ (ಸಲಿಂಗರತಿ) ಪ್ರಕರಣ ಸಂಬಂಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ನಾಳೆ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನ ವೀಕೆಂಡ್ ಒಂಟಿತನ ಕಳೆಯಲು ಆಟೋ ಡ್ರೈವರ್ ಆದ ಟೆಕ್ಕಿ!
undefined
ಜೂನ್ 23 ರಂದು ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಸೂರಜ್ ರೇವಣ್ಣಗೆ ಈಗ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ. ಪ್ರಕರಣ ನಡೆದು 29 ದಿನಗಳ ನಂತರ ಈಗ ಸೂರಜ್ ಗೆ ಜಾಮೀನು ಸಿಕ್ಕಿದೆ. ಸೂರಜ್ ವಿರುದ್ಧ ಇಬ್ಬರು ದೂರು ಸಲ್ಲಿಸಿದ್ದರು. ಇದರಲ್ಲಿ ಎರಡೂ ಕೇಸ್ ನಲ್ಲಿ ಜಾಮೀನು ಮಂಜೂರಾಗಿದೆ. ನ್ಯಾ.ಸಂತೋಷ್ ಗಜಾನನ ಭಟ್ ಅವರಿಂದ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಬಿದ್ದಿದೆ.
ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆ, ಬಾತ್ ರೂಂನಲ್ಲಿ ಉಸಿರು ಕಟ್ಟಿ ತಾಯಿ-ಮಗ ಸಾವು!
ಹಾಸನ ಜಿಲ್ಲೆಯ ಜೆಡಿಎಸ್ ಪಕ್ಷದ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಸೂರಜ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಸಿಐಡಿ ಈ ಪ್ರಕರಣದ ತನಿಖೆ ನಡೆಸುತ್ತಿದೆ.
ಷರತ್ತುಗಳೇನು?: ದೂರುದಾರರಿಗೆ ಮತ್ತು ಸಂತ್ರಸ್ತರಿಗೆ ಬೆದರಿಕೆ ಹಾಕುವಂತಿಲ್ಲ. ತನಿಖೆಯಿಂದ ತಪ್ಪಿಸಿಕೊಳ್ಳಬಾರದು. ಕರೆದಾಗಲೆಲ್ಲ ವಿಚಾರಣೆಗೆ ಹಾಜರಾಗಬೇಕು. ಪಾಸ್‌ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒದಗಿಸಬೇಕು. ನ್ಯಾಯಾಲಯದಿಂದ ಲಿಖಿತ ಅನುಮತಿಯನ್ನು ಪಡೆಯದೆ ರಾಜ್ಯ ಬಿಟ್ಟು ಬೇರೆ ಕಡೆಗೆ ಪ್ರಯಾಣಿಸಬಾರದು. ಸಂತ್ರಸ್ಥನನ್ನು ಯಾವುದೇ ರೀತಿಯಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ಪ್ರತಿ ತಿಂಗಳ ಎರಡನೇ ಭಾನುವಾರ ಬೆಳಿಗ್ಗೆ 9.00 ರಿಂದ ಸಂಜೆ 5.00 ರವರೆಗೆ 6 ತಿಂಗಳ ಅವಧಿಗೆ ಹಾಜರಾತಿ ಹಾಕಬೇಕು.