
ಶಿವಮೊಗ್ಗ (ಆ.7) : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ.
ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ. ಕಳೆದ ವರ್ಷ 2022ರಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಬಾಲಕಿಯ ತಂದೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗಿತ್ತು. ಪ್ರಕರಣದ ತನಿಖಾಧಿಕಾರಿಯಾಗಿದ್ದ ಶಿವಮೊಗ್ಗ ಉಪ ವಿಭಾಗ-ಎ ಡಿವೈಎಸ್ಪಿ ಬಾಲರಾಜ್ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು.
ವಿಜಯಪುರ: ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ ಜೀವಾವಧಿ ಶಿಕ್ಷೆ
ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 9 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.
ಗ್ರಾಮ ಪಂಚಾಯಿತಿ ನೌಕರ ಆತ್ಮಹತ್ಯೆ
ಹೊಸದುರ್ಗ: ಗ್ರಾಮ ಪಂಚಾಯಿತಿ ಸದಸ್ಯರ ಕಿರುಕುಳದಿಂದ ಬೇಸತ್ತ ನೌಕರನೊಬ್ಬ ತಾಲೂಕಿನ ಜಾನಕಲ್ ಗ್ರಾಮದ ಬಳಿ ಜಮೀನೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ನಡೆದಿದೆ.
ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಪಂನಲ್ಲಿ ಎಸ್‌ಡಿಎ ಆಗಿದ್ದ ಎಸ್‌ಡಿಎ ಎಂ. ತಿಪ್ಪೆಸ್ವಾಮಿ (58) ಆತ್ಮಹತ್ಯಗೆ ಶರಣಾದ ವ್ಯಕ್ತಿ. ಸಾಯುವ ಮುನ್ನ ಬರೆದ ಪತ್ರದಲ್ಲಿ ಪಂಚಾಯಿತಿಯಲ್ಲಿ ಖಾತೆ ಮಾಡಿಕೊಡುವ ವಿಚಾರದಲ್ಲಿ ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ , ತಾಪಂ ಇಓ ರವಿ, ಗ್ರಾಪಂ ಸದಸ್ಯರು ಹಾಗೂ ಮೋಹನ್‌ಕುಮಾರ್, ಮೂರ್ತಿ, ಮೋಹನ, ಉಗ್ರಪ್ಪ, ಲವ, ರಾಜಪ್ಪ, ಶಿವಮೂರ್ತಿ, ಪ್ರಸನ್ನ, ವಿನೋದಮ್ಮ, ಹಾಲೇನಹಳ್ಳಿ ರಾಜೇಶ ಸೇರಿ 30 ಜನರು ಕಿರುಕುಳ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
Mandya news: ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿ ಆತ್ಮಾಹುತಿಗೆ ರೈತ ಯತ್ನ!
ಮೃತ ತಿಪ್ಪೆಸ್ವಾಮಿ ಪುತ್ರ ರಾಜಶೇಖರಪ್ಪ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ , ತಾಪಂ ಇಒ ರವಿ ಅವರನ್ನು ಹೊರತು ಪಡಿಸಿ ಗ್ರಾಪಂ ಸದಸ್ಯರ ಕಿರುಕುಳದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ