
ಶಿವಮೊಗ್ಗ (ಜು.7): ನಿಗೂಢವಾಗಿ ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆಯಾದ ಪ್ರಕರಣ ಆಗುಂಬೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಯುವತಿಯ ಕೊಲೆ ತಾನೇ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಆರೋಪಿ.
ಕುಶಾಲ್ ಎಂಬುವವರ ಮಗಳಾದ ಪೂಜಾ(24) ಜೂನ್ 30 ರಂದು ಮನೆಯಿಂದ ಹೊರಹೋದಾಕೆ ನಿಗೂಢವಾಗಿ ನಾಪತ್ತೆಯಾಗಿದ್ದಳು. ಯುವತಿ ನಾಪತ್ತೆಯಾಗಿರುವ ಬಗ್ಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗುಂಬೆ ಪೊಲೀಸ್ ಠಾಣೆಯ ಪಿಎಸ್ಐ ರಂಗನಾಥ್ ಅಂತರಗಟ್ಟಿ ನೇತೃತ್ವದಲ್ಲಿ ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು. ಹೊಂಡಾದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿತ್ತು.
ದೇವದುರ್ಗ: ಹೆದರಿಸಲು ಹೋದ ಮೂವರ ಮೇಲೆ ಚಿರತೆ ದಾಳಿ!
ಯುವತಿಗೆ ಪರಿಚಯವಿದ್ದ ಮಣಿ ಎಂಬುವವನೇಕತ್ತು ಹಿಸುಕಿ ಸಾಯಿಸಿ ಬಳಿಕ ನಾಲೂರು ಸಮೀಪ ಹೊಂಡದಲ್ಲಿ ಬಿಸಾಡಿದ್ದ ಹೋಗಿದ್ದಾನೆ. ಈ ಬಗ್ಗೆ ಪೊಲೀಸರ ಮುಂದೆಯೇ ತಪ್ಪೊಪ್ಪಿಕೊಂಡಿರುವ ಆರೋಪಿ. ಸದ್ಯ ಶವ ಮಹಜರು ನಡೆಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವ ಪೊಲೀಸರು. ಆರೋಪಿ ಬಂಧಿಸಲಾಗಿದ್ದು. ತನಿಖೆ ಮುಂದುವರಿದಿದೆ.
ಕೊಲೆ ನಡೆದ ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ:
ಯುವತಿ ಪೂಜೆ ಕೊಲೆ ನಡೆದ ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಘಟನಾ ಸ್ಥಳದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ