ಶಿವಮೊಗ್ಗ: ಸಾಗರ ಭೀಕರ ರಸ್ತೆ ಅಪಘಾತಕ್ಕೆ ರಾಯಚೂರಿನ ಮೂವರ ಬಲಿ

Published : Mar 08, 2020, 11:01 AM ISTUpdated : Mar 08, 2020, 11:03 AM IST
ಶಿವಮೊಗ್ಗ: ಸಾಗರ ಭೀಕರ ರಸ್ತೆ ಅಪಘಾತಕ್ಕೆ ರಾಯಚೂರಿನ ಮೂವರ ಬಲಿ

ಸಾರಾಂಶ

ಭೀಕರ ರಸ್ತೆ ಅಪಘಾತ/ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಅಪಘಾಥ/ ರಾಯಚೂರು ಮೂಲದ ಮೂವರ ಸಾವು/ ಮರಕ್ಕೆ ಡಿಕ್ಕಿ ಹೊಡೆದ ಕಾರು

ಶಿವಮೊಗ್ಗ(ಮಾ. 08) ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಭೀಕರ ಅಪಘಾತ ರಾಯಚೂರು ಮೂಲದ ಮೂವರನ್ನು ಬಲಿಪಡೆದಿದೆ. ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಕಾಸ್ಪಾಡಿ ಗ್ರಾಮದ ಬಳಿ ಬೆಳಗ್ಗಿನ ಜಾವ  ನಡೆದ ರಸ್ತೆ ಅಪಘಾತದಲ್ಲಿ ರಾಯಚೂರಿನ ಶಕ್ತಿ ನಗರದ ಕೆಪಿಸಿ ಉದ್ಯೋಗಿಗಳಾದ  ವೆಂಕಟೇಶ್ (55), ತಿಪ್ಪಣ್ಣ (60), ಸಿದ್ದಪ್ಪ (40) ಸಾವನ್ನಪ್ಪಿದ್ದಾರೆ. ನಾಗರಾಜ್  ಗಾಯಾಳುವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಲೆನಾಡಿನಲ್ಲಿ ಮಂಗನ ಕಾಯಿಲೆ ಆರ್ಭಟ!

 ಕಾರ್ಗಲ್ ನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಕಾಸ್ಪಾಡಿ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಸಾಗರ ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ