
ಶಿವಮೊಗ್ಗ, (ಆಗಸ್ಟ್.3): ವಿಚಾರಣಾಧೀನ ಖೈದಿಯೊಬ್ಬ ನೇಣುಬಿಗಿದುಕೊಂಂಡ ಘಟನೆ ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಶನಿವಾರ ನಡೆದಿದೆ.
ಬಸವರಾಜ್ (38) ಎಂಬ ಖೈದಿ, ಜೈಲಿನ ಶರಾವತಿ ವಾರ್ಡ್‌ನ ಕೊಠಡಿ ಸಂಖ್ಯೆ 42ರಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಈ ಘಟನೆ ಜೈಲಿನ ಭದ್ರತೆ ಮತ್ತು ಖೈದಿಗಳ ಮಾನಸಿಕ ಆರೋಗ್ಯದ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಘಟನೆ ಹಿನ್ನೆಲೆ:
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ನಿವಾಸಿಯಾಗಿದ್ದ ಬಸವರಾಜ್, ಬಳ್ಳಾರಿಯ ಮೈನ್ಸ್‌ನಲ್ಲಿ ಲಾರಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಇವನು ಶಿಕಾರಿಪುರ ಪಟ್ಟಣದ ಸೊಸೈಟಿ ಕೇರಿಯಲ್ಲಿ ಜೂನ್ 11, 2025ರಂದು ತನ್ನ ಪತ್ನಿ ಮಂಜುಳಾ (32) ರನ್ನು ಕೊಲೆ ಮಾಡಿದ ಆರೋಪದ ಮೇಲೆ ಜೂನ್ 13ರಂದು ಬಂಧನಕ್ಕೊಳಗಾಗಿ ಕೇಂದ್ರ ಕಾರಾಗೃಹಕ್ಕೆ ಕಳಿಸಲಾಗಿತತು. ಕೊಲೆ ಪ್ರಕರಣದಲ್ಲಿ ವಿಚಾರಣೆಗೆ ಒಳಗಾಗಿದ್ದ ಬಸವರಾಜ್, ಜೈಲಿನಲ್ಲಿ ತೀವ್ರ ಮಾನಸಿಕ ಒತ್ತಡದಲ್ಲಿದ್ದನೆಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಜೈಲು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಶಿವಮೊಗ್ಗದ ಸರ್ಕಾರಿ ಮೆಗನ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಜೈಲಿನ ಒಳಗಿನ ಭದ್ರತೆ, ಖೈದಿಗಳ ಮೇಲ್ವಿಚಾರಣೆ ಕೊರತೆಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ