ಶಿವಮೊಗ್ಗದಲ್ಲಿ ಹೃದಯವಿದ್ರಾವಕ ಘಟನೆ: ಕಾರ್ಮಿಕನ ಜೀವ ಕಸಿದ ಕ್ರೇನ್‌, ಅಷ್ಟಕ್ಕೂ ಏನಾಯ್ತು?

Published : Jun 06, 2026, 07:34 PM IST
Shivamogga Crane Accident

ಸಾರಾಂಶ

ನಗರದ ಹೊಸಮನೆ ಬಡಾವಣೆಯಲ್ಲಿ ನಿರ್ಮಾಣ ಕಾಮಗಾರಿ ವೇಳೆ ನಡೆದ ಭೀಕರ ಅಪಘಾತದಲ್ಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ..

ಶಿವಮೊಗ್ಗ (ಜೂ.06): ನಗರದ ಹೊಸಮನೆ ಬಡಾವಣೆಯಲ್ಲಿ ನಿರ್ಮಾಣ ಕಾಮಗಾರಿ ವೇಳೆ ನಡೆದ ಭೀಕರ ಅಪಘಾತದಲ್ಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಳಿಗೂಡು ಗ್ರಾಮದ ನಾಗೇಶ್ (48) ಎಂದು ಗುರುತಿಸಲಾಗಿದೆ.

ಅವರು ಹೊಸಮನೆ ಬಡಾವಣೆಯಲ್ಲಿರುವ ದೊಡ್ಡಮ್ಮ ಜಲದುರ್ಗಮ್ಮ ದೇವಸ್ಥಾನದ ಗೋಪುರ ನಿರ್ಮಾಣ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಮಾಹಿತಿಯ ಪ್ರಕಾರ, ದೇವಸ್ಥಾನದ ಮುಂಭಾಗದಲ್ಲಿ ಕಲ್ಲುಗಳನ್ನು ಸಾಗಿಸುತ್ತಿದ್ದ ಕ್ರೇನ್‌ ರಿವರ್ಸ್‌ ಆಗಿ ಚಲಿಸುತ್ತಿದ್ದ ವೇಳೆ ನಾಗೇಶ್‌ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ.

ಇದೇ ಸಂದರ್ಭದಲ್ಲಿ ಕ್ರೇನ್‌ನ ಮುಂಭಾಗದ ಚಕ್ರಗಳು ಅವರ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ. ತಲೆಯ ಮೇಲೆ ಚಕ್ರ ಹರಿದಿದ್ದರಿಂದ ತಲೆ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ನಾಗೇಶ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ದಾಖಲು

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಸತ್ಯನಾರಾಯಣ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಕೀಲೆ ತಾಯಿ, ಬಿಲಿಯನೇರ್ ಪ್ರಿಯಕರನಿಂದಲೇ ಮಗುವಿನ ಹ*ತ್ಯೆ: ಇಂಗ್ಲೆಂಡ್ ವೈದ್ಯೆ ಕೊಟ್ಟ ಸುಳಿವೇ ಭೇದಿಸಿತು ಕಾಡುಗೋಡಿ ಕೊ*ಲೆ ರಹಸ್ಯ
ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ: ಆಟವಾಡುತ್ತಿದ್ದ 9 ವರ್ಷದ ವಿದ್ಯಾರ್ಥಿ ನೀರಿನ ಹೊಂಡಕ್ಕೆ ಬಿದ್ದು ಸಾವು!