Harassment Case: ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಶಿವಮೊಗ್ಗ ಮೆಡಿಕಲ್ ಕಾಲೇಜಿನ ಡಾ ಅಶ್ವಿನ್ ಹೆಬ್ಬಾರ್ ಪೊಲೀಸ್ ವಶಕ್ಕೆ

Published : Jun 27, 2025, 02:49 PM ISTUpdated : Jun 27, 2025, 02:50 PM IST
Dr. Ashwin Hebbar

ಸಾರಾಂಶ

ಶಿವಮೊಗ್ಗದಲ್ಲಿ ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮೆಡಿಕಲ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದೇವಸ್ಥಾನವೊಂದರ ಬಳಿ ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗ (ಜೂ.27) : ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣ ಸಂಬಂಧ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕ ಡಾ.ಅಶ್ವಿನ್ ಹೆಬ್ಬಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ‌.

ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕನಾಗಿರುವ ಡಾ.ಅಶ್ವಿನ್ ಹೆಬ್ಬಾರ್ ನನ್ನು ಕರಾವಳಿ ಪ್ರದೇಶದ ದೇವಸ್ಥಾನವೊಂದರ ಸಮೀಪ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ವೈದ್ಯೆ ವಿದ್ಯಾರ್ಥಿನಿ ಡಾ.ಅಶ್ವಿನ್ ಹೆಬ್ಬಾರ್ ಎಂಬಾತನ ವಿರುದ್ದ ಶಿವಮೊಗ್ಗ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾದ ನಂತರ ವೈದ್ಯ ತಲೆಮರೆಸಿಕೊಂಡಿದ್ದ. ಡಾ.ಅಶ್ವಿನ್ ಹೆಬ್ಬಾರ್ ಬಂಧಿಸಬೇಕು ಮತ್ತು ಅಮಾನತುಗೊಳಿಸಬೇಕು ಎಂದು ಲಾಯರ್ಸ್ ಗೀಲ್ಡ್ ಸರ್ಕಾರಕ್ಕೆ ಒತ್ತಾಯಿಸಿತ್ತು. ಅಲ್ಲದೆ, ವೈದ್ಯ ವಿದ್ಯಾರ್ಥಿಗಳು ಕೂಡ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಯನ್ನು ಕೂಡ ನಡೆಸಿದ್ದರು.

ಪ್ರಕರಣ ಸಂಬಂಧ ಮಹಿಳಾ ಠಾಣೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ಆರೋಪಿ ಡಾ.ಅಶ್ವಿನ್ ಹೆಬ್ಬಾರ್ ರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಶಿವಮೊಗ್ಗಕ್ಕೆ ಕರೆ ತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?
ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ