ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು: ಸಾವಿನ ಸುತ್ತ ಅನುಮಾನ!

Published : Oct 31, 2025, 12:17 PM IST
dowry harassment

ಸಾರಾಂಶ

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಮಹಿಳೆಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಸಾವನ್ನಪ್ಪಿದ ಮಹಿಳೆಯನ್ನ ಪೂಜಾ ಎಂದು (30) ಎಂದು ಗುರುತಿಸಲಾಗಿದೆ.

ಶಿವಮೊಗ್ಗ (ಅ.31): ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಮಹಿಳೆಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಸಾವನ್ನಪ್ಪಿದ ಮಹಿಳೆಯನ್ನ ಪೂಜಾ ಎಂದು (30) ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ತೀರ್ಥಹಳ್ಳಿಯ ಕೋಣಂದೂರು ಸಮೀಪದ ಶಂಕರಳ್ಳಿ ಈಶ್ವರಪ್ಪನವರ ಮಗಳಾದ ಪೂಜಾಳನ್ನ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ನಿವಾಸಿ ಶರತ್ ಎಂಬಾತನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ವಿಷ ಕೊಟ್ಟು ಕೊಲೆಗೆ ಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪೂಜಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಪೂಜಾ ದಂಪತಿಗಳಿಗೆ ಎರಡು ವರ್ಷದ ಗಂಡು ಮಗುವಿತ್ತು. ಶರತ್ ತಂದೆ, ತಾಯಿ ಹಾಗೂ ಶರತ್ ನ ಸಹೋದರಿ ಶಬರಿ ಸೇರಿ ಪೂಜಾಳಿಗೆ ವರದಕ್ಷಿಣೆ ಕಿರುಕುಳ ನೀಡಡಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಮತ್ತೆ ಇದೇ ವಿಚಾರವಾಗಿ ಪೂಜಾ ಮೇಲೆ ಹಲ್ಲೆ ನಡೆದಿತ್ತು. ಪೂಜಾ ಗಂಡನ ಟಾರ್ಚರ್ ಬಗ್ಗೆ ತನ್ನ ತವರಿನ ಸದಸ್ಯರ ಬಳಿ ಹೇಳಿಕೊಂಡಿದ್ದಳು ಎನ್ನಲಾಗಿದೆ. ತವರು ಮನೆಯವರಿಂದ ಸಮಾಧಾನ ಮಾಡಲಾಗಿತ್ತು. ಎರಡು ದಿನಗಳ ಹಿಂದೆ ಕಳೆನಾಶಕ ಕೊಟ್ಟು ಕೊಲೆಗೆ ಯತ್ನಿಸಲಾಗಿತ್ತು. ಇದನ್ನು ಆತ್ಮ*ಹತ್ಯೆ ಅಂತಾ ಗಂಡನ ಕುಟುಂಬ ಬಿಂಬಿಸಲು ಯತ್ನಿಸಲಾಗಿತ್ತು.

ಪತಿ ಶರತ್ ಬಂಧನ

ಆದರೆ ಪೂಜಾಳ ಕುಟುಂಬ ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಶರತ್ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದರು. ಪೂಜಾಳನ್ನ ಕಳೆದುಕೊಂಡ ಪೂಜಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪತಿ ಶರತ್ ಹಾಗೂ ಆತನ ತಂದೆ ಸುಧಾಕರ್ ರನ್ನ ಪೊಲೀಸರು ಬಂಧಿಸಿದ್ದಾರೆ. ಅತ್ತೆ ರಾಧಾ ಮತ್ತು ಗಂಡನ ಅಕ್ಕ ಶಬರಿ ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರಿನ ಎನ್ ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ