ಮಲಗಿದ್ದಾಗ ಹಾವು ಕಚ್ಚಿದೆ ಅಂದ್ರೂ ಆಸ್ಪತ್ರೆಗೆ ಸೇರಿಸಲಿಲ್ಲ: ಎದ್ದೇಳುವಷ್ಟರಲ್ಲಿ ಹೆಣವಾಗಿದ್ದ ಮಗಳು

By Sathish Kumar KH  |  First Published May 23, 2023, 2:17 PM IST

ಮನೆಯಲ್ಲಿ  ಮಲಗಿದ್ದಾಗ ಹಾವು ಕಚ್ಚಿದೆ ಎಂದರೂ ಆಸ್ಪತ್ರೆಗೆ ಸೇರಿಸದೇ ಸುಮ್ಮನೆ ಮಲಗುವಂತೆ ಕುಟುಂಬಸ್ಥರು ಹೇಳಿದ್ದು, ಬಳಗಾಗುವಷ್ಟರಲ್ಲಿ ಮಗಳು ಹೆಣವಾಗಿದ್ದಳು.


ಶಿವಮೊಗ್ಗ (ಮೇ 23):  ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್‌ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು ಮಲಗಿದ್ದರು. ಆದರೆ, ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವಿಷ ದೇಹದ ತುಂಬಾ ಹರಡಿಕೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಇನ್ನು ಮೃತ ಯುವತಿಯನ್ನು ಅಕ್ಷತಾ ( 17) ಎಂದು ಗುರುತಿಸಲಾಗಿದೆ. ಸೊರಬ ತಾಲೂಕಿನಆನವಟ್ಟಿ ಹೋಬಳಿಯ ತಲ್ಲೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ನಾಲ್ಕು ದಿನಗಳ ಹಿಂದೆ  ಅಕ್ಷತಾ ರಾತ್ರಿ  ತಾಯಿಯ ಜೊತೆ ಮಲಗಿದ್ದ ವೇಳೆ ಕಿರುಚಾಡಿ ಹಾವು ಕಚ್ಚಿತು ಎಂದಿದ್ದಳು. ಮಧ್ಯರಾತ್ರಿ ವಿದ್ಯುತ್ ದೀಪ ಹಾಕಿದ್ದಾಗ ಬೆಳಕಿನಲ್ಲಿ ಹಾವು ಕಾಣಿಸಿರಲಿಲ್ಲ. ನಂತರ ಆಕೆಯ ದೇಹದಲ್ಲಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

Tap to resize

Latest Videos

BELAGAVI: ಮನೆ ಮುಂದಿನ ಹೈಟೆನ್ಷನ್‌ ವೈರ್‌ ತಾಗಿ 13 ವರ್ಷದ ಬಾಲಕಿ ದುರಂತ ಸಾವು!

ಎರಡು ದಿನವಾದರೂ ಹಾವು ಕಚ್ಚಿದ್ದು ಪತ್ತೆ ಹಚ್ಚಿಲ್ಲ: ಮೊದಲು ಆನವಟ್ಟಿ ಖಾಸಗಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆಯಲಾಗಿದೆ. ಆದರೆ, ಅಲ್ಲಿಯೂ ಆರೋಗ್ಯ ಚೇತರಿಕೆ ಕಾಣದ ಹಿನ್ನೆಲಯಲ್ಲಿ ಶಿಕಾರಿಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಯುವತಿಗೆ ಹಾವು ಕಚ್ಚಿದೆ ಎಂಬ ವಿಷಯ ತಿಳಿದ ನಂತರ ಆಕೆಯನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಹಾವಿನ ವಿಷ ದೇಹಪೂರ್ತಿ ಹರಡಿಕೊಂಡಿತ್ತು. ವೈದ್ಯರು ನಿರಂತರವಾಗಿ ಚಿಕಿತ್ಸೆಯನ್ನೂ ನೀಡುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಮಲಗಿದ್ದ ಮಗಳು ಬೆಳಗ್ಗೆ ಏಳುವಷ್ಟರಲ್ಲಿ ಹೆಣವಾಗಿದ್ದಳು ಎಂದು ತಿಳಿದುಬಂದಿದೆ.

ದ್ವಿತೀಯ ಪಿಯುಸಿ ಕಾಲೇಜಿಗೆ ಹೋಗಬೇಕಿತ್ತು: ಇನ್ನು ಮೃತ ವಿದ್ಯಾರ್ಥಿನಿ ಶಿಕಾರಿಪುರದ ಖಾಸಗಿ ಕಾಲೇಜಿನಲ್ಲಿ ಮೊದಲ ಪಿಯುಸಿ ಪರೀಕ್ಷೆಯನ್ನು ಬರೆದು ಉತ್ತೀರ್ಣಳಾಗಿದ್ದಳು. ಈ 2023-24ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಹೋಗಬೇಕಿತ್ತು. ಆದರೆ, ರಜೆಯ ಹಿನ್ನೆಲೆಯಲ್ಲಿ ಮನೆಯ ಸದ್ಯರೆಲ್ಲರೂ ಒಟ್ಟಿಗೆ ಮಲಗುತ್ತಿದ್ದು, ಹಾವು ಕಚ್ಚಿದ್ದನ್ನು ಕೂಡ ಮನೆ ಸದಸ್ಯರು ನಿರ್ಲಕ್ಷ್ಯ ಮಾಡಿದ್ದಾರೆ. ಹಾವಿನ ಬದಲು ಬೇರೆ ಯಾವುದೋ ಹುಳ ಕಚ್ಚಿರಬೇಕು ಎಂದು ಹೇಳಿ ಸಮಾಧಾನ ಮಾಡಿದ್ದಾರೆ. ಆದರೆ, ಕುಟುಂಬದ ನಿರ್ಲಕ್ಷ್ಯದಿಂದ ಮಗಳನ್ನೇ ಕಳೆದುಕೊಂಡಿದ್ದಾರೆ. ಈ ಘಟನೆ ಸೊರಬ ತಾಲೂಕಿನ ಆನವಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Bengaluru: ಡ್ರೈವರ್‌ ಮಾತನ್ನ ಉಡಾಫೆ ಮಾಡಿದ ಕುಟುಂಬ: ಮಗಳನ್ನು ನೀರಲ್ಲಿ ಮುಳುಗಿಸಿ ಕಣ್ಣೀರು

ಬೆಳಗಾವಿಯಲ್ಲಿ ವಿದ್ಯುತ್‌ ತಂತಿ ತಗುಲಿ ಬಾಲಕಿ ಸಾವು:   ಮನೆ ಮುಂದಿನ ವಿದ್ಯುತ್‌ ತಂತಿಯನ್ನು ಮುಟ್ಟಿದ (ಹೈಟೆನ್ಷನ್ ವೈಯರ್) 13 ವರ್ಷದ ಬಾಲಕಿ ಸ್ಥಳದಲ್ಲೇ ಕರೆಂಟ್‌ ಶಾಕ್‌ ಕೊಡೆದು ಸಾವನ್ನಪ್ಪಿದ ದುರ್ಘಟನೆ ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಚ್ಛೆ ಗ್ರಾಮದ ಮಧುರಾ ಮೋರೆ (13) ಸ್ಥಳದಲ್ಲೇ ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ಘಟನೆ ನಡೆದಿದೆ.

ಹೆಸ್ಕಾಂ ನೋಟಿಸ್‌ಗೂ ನಿರ್ಲಕ್ಷ್ಯ: ಮನೆಯ ಒಂದನೇ ಮಹಡಿ ಮೇಲೆ ಆಟ ಆಡುತ್ತ ನಿಂತಾಗ ಮನೆಯ ಮುಂದೆಯೇ ನೇತಾಡುತ್ತಿದ್ದ ಹೈಟೆನ್ಷನ್ ವಿದ್ಯುತ್‌ ತಂತಿ ತಾಗಿದೆ. ಇನ್ನು ವಿದ್ಯುತ್‌ ತಂತಿ ತಾಗಿದ ಕ್ಷಣವೇ ಬಾಲಕಿ ಕರೆಂಟ್‌ ಶಾಕ್‌ ಹೊಡೆದು ಮೈಯೆಲ್ಲಾ ಸುಟ್ಟ ಗಾಯಗಳಂತಾಗಿ ಸಾವನ್ನಪ್ಪಿದ್ದಾಳೆ. ಇನ್ನು ಈ ಘಟನೆ ನಡೆದ ವೇಳೆ ಮನೆಯ ಮುಂದೆ ಯಾರೂ ಇರಲಿಲ್ಲ. ಘಟನೆ ನಡೆದ ನಂತರ ಮಗುವನ್ನು ನೋಡಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಹೇಳಿದ್ದಾರೆ. 

click me!