ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ, ಈಗ ನನ್ನನ್ನು ಮದುವೆಯಾಗಲು ನಿರಾಕರಿಸಿದಳೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಶಿವಮೊಗ್ಗ (ಮೇ 23): ಆಹಾ.. ನನ್ನ ಮದ್ವೆಯಂತೆ, ಓಹೋ.. .ನನ್ನ ಮದ್ವೆಯಂತೆ.. ಎಂದು ಸಂತಸದಿಂದ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ, ಈಗ ನನ್ನನ್ನು ಮದುವೆಯಾಗಲು ನಿರಾಕರಿಸಿದಳೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮಾಸೂರು ಗ್ರಾಮದಲ್ಲಿ ನಡೆದಿದೆ.
ಒಂದು ಹುಡುಗನಿಗೆ ಒಂದು ಹುಡುಗಿ ಜೋಡಿ ಇದ್ದೇ ಇರುತ್ತಾರೆ ಎನ್ನುವುದು ನಮ್ಮ ನಂಬಿಕೆಯಾಗಿದೆ. ಜೊತೆಗೆ, ಮದುವೆ ಎನ್ನುವುದು ಸ್ವರ್ಗದಲ್ಲಿಯೇ ನಿಶ್ಚಯವಾಗಿರುತ್ತದೆ ಎನ್ನುವುದು ಕೂಡ ಮದುವೆ ವಿಚಾರದಲ್ಲಿ ಹೇಳುವ ನುಡಿಯಾಗಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮಾಸೂರು ಗ್ರಾಮದ ಯುವಕ ಕಳೆದ ವರ್ಷ ಯುವತಿಯೊಬ್ಬಳನ್ನು ವಿವಾಹ ಮಾಡಿಕೊಳ್ಳುವುದಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದನು. ಆಹಾ.. ನನ್ನ ಮದ್ವೆಯಂತೆ, ಓಹೋ.. .ನನ್ನ ಮದ್ವೆಯಂತೆ ಎಂದು ಕನಸು ಕಾಣುತ್ತಿದ್ದ ಯುವಕನನ್ನು ನಾನು ಮದುವೆಯಾಗಲು ಒಲ್ಲೆನೆಂದು ಯುವತಿ ಹೇಳಿದ್ದಾಳೆ. ಇದನ್ನು ಕೇಳಿದ ಯುವಕ ತನ್ನ ಮದುವೆ ಮುರಿದುಬಿದ್ದಿದ್ದಕ್ಕೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ.
ಮಲಗಿದ್ದಾಗ ಹಾವು ಕಚ್ಚಿದೆ ಅಂದ್ರೂ ಆಸ್ಪತ್ರೆಗೆ ಸೇರಿಸಲಿಲ್ಲ: ಎದ್ದೇಳುವಷ್ಟರಲ್ಲಿ ಹೆಣವಾಗಿದ್ದ ಮಗಳು
12 ದಿನ ಆಸ್ಪತ್ರೆಯಲ್ಲಿದ್ದರೂ ಚಿಕಿತ್ಸೆ ಫಲಿಸದೇ ಸಾವು: ಶಿಕಾರಿಪುರ ತಾಲೂಕಿನ ಮಾಸೂರು ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಮೃತ ಯುವಕನನ್ನು ಮಾಸೂರಿನ ಅಣ್ಣಪ್ಪ (30) ಎಂದು ಗುರುತಿಸಲಾಗಿದೆ. ಯುವಕ- ಯುವತಿ ಇಬ್ಬರೂ ಪರಸ್ಪರ ಒಪ್ಪಿಕೊಂಡು ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ, ಒಂದು ವರ್ಷವಾದರೂ ಮದುವೆ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಯುವತಿಯ ತಂದೆ ಮದುವೆಗೆ ನಿರಾಕರಿಸಿದ್ದಾರೆ. ಇದರಿಂದ ಮನನೊಂದ ಅಣ್ಣಪ್ಪ ಮೇ 10 ರಂದು ವಿಷ ಸೇವಿಸಿದ್ದನು. ನಂತರ ಆತನನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ. ಈ ಘಟನೆ ಕುರಿತಂತೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಲಗಿದ್ದಾಗ ಹಾವು ಕಚ್ಚಿ ಯುವತಿ ಸಾವು:
ಶಿವಮೊಗ್ಗ (ಮೇ 23): ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು ಮಲಗಿದ್ದರು. ಆದರೆ, ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವಿಷ ದೇಹದ ತುಂಬಾ ಹರಡಿಕೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಇನ್ನು ಮೃತ ಯುವತಿಯನ್ನು ಅಕ್ಷತಾ ( 17) ಎಂದು ಗುರುತಿಸಲಾಗಿದೆ. ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ತಲ್ಲೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
Belagavi: ಮನೆ ಮುಂದಿನ ಹೈಟೆನ್ಷನ್ ವೈರ್ ತಾಗಿ 13 ವರ್ಷದ ಬಾಲಕಿ ದುರಂತ ಸಾವು!
ಎರಡು ದಿನವಾದರೂ ಹಾವು ಕಚ್ಚಿದ್ದು ಪತ್ತೆ ಹಚ್ಚಿಲ್ಲ: ಮೊದಲು ಆನವಟ್ಟಿ ಖಾಸಗಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆಯಲಾಗಿದೆ. ಆದರೆ, ಅಲ್ಲಿಯೂ ಆರೋಗ್ಯ ಚೇತರಿಕೆ ಕಾಣದ ಹಿನ್ನೆಲಯಲ್ಲಿ ಶಿಕಾರಿಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಯುವತಿಗೆ ಹಾವು ಕಚ್ಚಿದೆ ಎಂಬ ವಿಷಯ ತಿಳಿದ ನಂತರ ಆಕೆಯನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಹಾವಿನ ವಿಷ ದೇಹಪೂರ್ತಿ ಹರಡಿಕೊಂಡಿತ್ತು. ವೈದ್ಯರು ನಿರಂತರವಾಗಿ ಚಿಕಿತ್ಸೆಯನ್ನೂ ನೀಡುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಮಲಗಿದ್ದ ಮಗಳು ಬೆಳಗ್ಗೆ ಏಳುವಷ್ಟರಲ್ಲಿ ಹೆಣವಾಗಿದ್ದಳು ಎಂದು ತಿಳಿದುಬಂದಿದೆ.