
ಬೆಂಗಳೂರು (ಆ.9): ಮಷ್ರೂಮ್ ಬಿರಿಯಾನಿಗೆ ಚಟ್ನಿ ಕೊಟ್ಟಿಲ್ಲವೆಂಬ ಕ್ಷುಲ್ಲಕ್ಕ ಕಾರಣಕ್ಕೆ ಕಿಡಿಗೇಡಿಗಳು ಹೋಟೆಲ್ ಧ್ವಂಸ ಮಾಡಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಘಟನೆಯ ಸಂಬಂಧ ಹೊಟೇಲ್ ಸಿಬ್ಬಂದಿ ರಂಜಿತ್ ಎಂಬುವರು ನೀಡಿದ ದೂರಿನನ್ವಯ ಅರುಣ್ ಎಂಬಾತನ ವಿರುದ್ಧ ಗಂಭೀರವಲ್ಲದ ಪ್ರಕರಣ (ಎನ್‌ಸಿಆರ್) ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆ.4 ರ ರಾತ್ರಿ ಅಪ್ಪು ಮಷ್ರೂಮ್ ದಮ್ ಬಿರಿಯಾನಿ ಹೋಟೆಲ್‌ಗೆ ಕಿಡಿಗೇಡಿಗಳ ತಂಡ ಬಂದಿತ್ತು. ಈ ವೇಳೆ ಬಿರಿಯಾನಿಗೆ ಚಟ್ನಿ ಯಾಕೆ ಕೊಟ್ಟಿಲ್ಲವೆಂದು ಸಿಬ್ಬಂದಿ ರಂಜಿತ್ ಎಂಬಾತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಹೋಟೆಲ್ ಮುಂದೆ ಇದ್ದ ಟೆಂಟ್, ಕ್ಯಾಶ್ ಕೌಂಟರ್ ಧ್ವಂಸಗೊಳಿಸಿದ್ದಾರೆ. ಅಂಗಡಿಯಲ್ಲಿದ್ದ ಸಿಬ್ಬಂದಿ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ಆರಂಭದಲ್ಲಿ ಪೊಲೀಸರು ನಿರಾಕರಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ. ಕಿಡಿಗೇಡಿಗಳು ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ