
ಶ್ರೀರಂಗಪಟ್ಟಣ (ಆ.17): ಬಾರ್ ಅಂಡ್ ರಸ್ಟೋರೆಂಟ್‌ನಲ್ಲಿ ಕ್ಯಾಷಿಯರ್ ಹಾಗೂ ಮ್ಯಾನೇಜರ್ ಆಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮ1ಹತ್ಯೆ ಮಾಡಿರುವ ಘಟನೆ ಪಾಂಡವಪುರ ತಾಲೂಕಿನ ಮಂಚನಹಳ್ಳಿ ಬಳಿ ನಡೆದಿದೆ.
ಮಂಡ್ಯ ಬಸರಾಳು ಗ್ರಾಮದ ಬೋರೇಗೌಡ (53) ಈತ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ವಾಸವಿದ್ದ ಎಂದು ತಿಳಿದು ಬಂದಿದೆ. ಕೆ.ಆರ್.ಪೇಟೆ- ಮೈಸೂರು ಮುಖ್ಯ ರಸ್ತೆಯ ಮಂಚನಹಳ್ಳಿ ಬಳಿ ಇರುವ ಮಾಣಿಕ್ಯ ಬೋರ್ಡಿಂಗ್ ಲಾಡ್ಜಿಂಗ್ ಮತ್ತು ರೆಸ್ಟೋರೆಂಟ್‌ನಲ್ಲಿ ಕ್ಯಾಷಿಯರ್ ಹಾಗೂ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದನು.
ಶನಿವಾರ ಬೆಳಗ್ಗೆ ನನ್ನ ಸಾವಿಗೆ ನಾನೇ ಕಾರಣ. ತಮ್ಮ ಜಮೀನನ್ನು ಸಮಭಾಗ ಮಾಡಿ ಸಹೋದರರಿಗೆ ಹಂಚುವಂತೆ ಡೆತ್ ನೋಟ್ ಬರೆದಿಟ್ಟು ಕಟ್ಟಡ ಮೇಲಂತಸ್ಥಿನ ರೂಂ ಒಂದರ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಮೃತರ ಪತ್ನಿ ನೀಡಿರುವ ದೂರಿನ ಮೇರೆಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಿದ್ದಾರೆ.
ಬಾರ್ ಅಂಡ್ ರಸ್ಟೋರೆಂಟ್‌ನಲ್ಲಿ ಕ್ಯಾಷಿಯರ್ ಹಾಗೂ ಮ್ಯಾನೇಜರ್ ಆಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮ1ಹತ್ಯೆ ಮಾಡಿರುವ ಘಟನೆ ಪಾಂಡವಪುರ ತಾಲೂಕಿನ ಮಂಚನಹಳ್ಳಿ ಬಳಿ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ