ವಿಜಯಪುರ: ಮನೆ, ಬೈಕ್‌ ಕಳವು, ಅಪಾರ ಮೌಲ್ಯದ ಬೆಳ್ಳಿ, ಚಿನ್ನಾಭರಣ ವಶ

Published : Dec 14, 2022, 02:00 PM IST
ವಿಜಯಪುರ: ಮನೆ, ಬೈಕ್‌ ಕಳವು, ಅಪಾರ ಮೌಲ್ಯದ ಬೆಳ್ಳಿ, ಚಿನ್ನಾಭರಣ ವಶ

ಸಾರಾಂಶ

ಮನೆಗಳ್ಳತನದ ಮೂವರು, ಇಬ್ಬರು ಬೈಕ್‌ ಕಳ್ಳರು ಸೇರಿದಂತೆ ಐವರು ಆರೋಪಿಗಳ ಬಂಧನ: ಎಸ್ಪಿ ಎಚ್‌.ಡಿ. ಆನಂದಕುಮಾರ

ವಿಜಯಪುರ(ಡಿ.14):  ತೋಟದಲ್ಲಿ ಒಂಟಿ ಮನೆಗಳಿಗೆ ನುಗ್ಗಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 12.86 ಲಕ್ಷ ಚಿನ್ನ, ಬೆಳ್ಳೆ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದಕುಮಾರ ಹೇಳಿದರು. ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂದಗಿಯ ಕಲ್ಯಾಣನಗರದ ಶ್ರೀಕಾಂತ ಹರಿಜನ ಉಫ್‌ರ್‍ ಬಡಿಗೇರ, ಹಿಟ್ನಳ್ಳಿಯ ಜೈಭೀಮ ಉಫ್‌ರ್‍ ಬಾಬು ಪಡಕೋಟೆ ಹಾಗೂ ಆಕಾಶ ಕಲ್ಲವ್ವಗೋಳ ಬಂಧಿತ ಆರೋಪಿಗಳಾಗಿದ್ದು, ವಿಶೇಷ ತನಿಖಾ ತಂಡ ಆರೋಪಿಗಳನ್ನು ಪತ್ತೆ ಹಚ್ಚಿದೆ ಎಂದರು.

ಆರೋಪಿಗಳನ್ನು ಠಾಣೆಗೆ ಕರೆ ತಂದು ವಿಚಾರಣೆಗೆ ಒಳಪಡಿಸಿದಾಗ ಆರೋಪಿತರು ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಬಬಲೇಶ್ವರ ಪೊಲೀಸ್‌ ಠಾಣೆ ವ್ಯಾಪ್ತಿಯ ಹೊನಗನಹಳ್ಳಿ ಗ್ರಾಮದ ಸಮೀಪವಿರುವ ರೈಲ್ವೆ ಟ್ರ್ಯಾಕ್‌ ಹತ್ತಿರ ಸವನಳ್ಳಿ ಗ್ರಾಮದ ಸೋಮನಾಥ ಬಗಲಿ ಅವರ ತೋಟದ ಮನೆ ಹಿಂಬಾಗಿಲು ಮುರಿದು ಒಳ ನುಗ್ಗಿ ಮನೆಯಲ್ಲಿದ್ದ 9 ತೊಲಿ 3 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಅದನ್ನು ಕಳ್ಳರು ಮಾರಾಟ ಮಾಡಲು ಹೊರಟಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಇದೇ ವೇಳೆ ಈ ಬಂಧಿತ ಆರೋಪಿತರು ವಿಜಯಪುರ ಗ್ರಾಮೀಣ, ತಿಕೋಟಾ, ಹೋರ್ತಿ ಹಾಗೂ ಕಲಬುರಗಿ ಜಿಲ್ಲೆ ನೆಲೋಗಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮನೆಗಳನ್ನು ಕಳ್ಳತನ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈ ಪ್ರಕರಣಗಳನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಒಂದು ಸವಾಲಾಗಿತ್ತು. ಡಿ.12ರಂದು ರಾತ್ರಿ ಕಾರಜೋಳ ಕ್ರಾಸ್‌ ಹತ್ತಿರ ಸಂಶಯಾಸ್ಪದವಾಗಿ ಕಾರಿನಲ್ಲಿ ತಿರುಗಾಡುವತ್ತಿರುವುದನ್ನು ಅನುಮಾನದಿಂದ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದರು.

Bengaluru Crime: ಐಷಾರಾಮಿ ಜೀವನಕ್ಕೆ ಪೀಡಿಸಿದ ಪತ್ನಿ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಸಾವು

ಬಂಧಿತ ಆರೋಪಿಗಳಿಂದ 250 ಗ್ರಾಂ ತೂಕದ .12.50 ಲಕ್ಷ, 600 ಗ್ರಾಂ ತೂಕದ .36,000 ಬೆಳ್ಳಿ ಆಭರಣ, .5.50 ಲಕ್ಷ ಮೌಲ್ಯದ ನಿಸ್ಸಾನ ಸನ್ನಿ ಕಂಪನಿಯ ಒಂದು ಕಾರ್‌, ಕೃತ್ಯಕ್ಕೆ ಬಳಸುತ್ತಿದ್ದ ಕಬ್ಬಿಣದ ರಾಡ್‌, ಸುತ್ತಿಗೆ, ಚಾಣ ಇತರ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

Ballari: ಮ್ಯಾಟ್ರಿಮೋನಿ ದುರ್ಬಳಕೆ ಮಾಡಿ ಶಿಕ್ಷಕನಿಗೆ ವಂಚನೆ: ಯುವತಿಯರ ಮಾತಿಗೆ ಮರುಳಾಗಿ ಹಣ ಕಳೆದುಕೊಂಡ

ಈ ಮನೆಗಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿ ಭೇದಿಸಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದಕುಮಾರ, ಜಿಲ್ಲಾಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾರ್ಗದರ್ಶನದಲ್ಲಿ ವಿಜಯಪುರ ಡಿಎಸ್ಪಿ ಸಿದ್ದೇಶ್ವರ, ವಿಜಯಪುರ ಗ್ರಾಮೀಣ ಪೊಲೀಸ್‌ ಇನ್ಸಪೆಕ್ಟರ್‌ ಸಂಗಮೇಶ ಪಾಲಬಾವಿ ನೇತೃತ್ವದಲ್ಲಿ ವಿಶೇಷ ತನಿಖಾ ಪೊಲೀಸ್‌ ತಂಡ ರಚಿಸಲಾಗಿತ್ತು. ಈ ತಂಡವು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಗ ಳನ್ನು ಪತ್ತೆ ಹಚ್ಚಿ ಸೆರೆ ಹಿಡಿದಿದೆ ಎಂದು ಅವರು ಪ್ರಶಂಸಿಸಿದರು.

ಬೈಕ್‌ ಕಳ್ಳರ ಬಂಧನ

ವಿಜಯಪುರ ನಗರದಲ್ಲಿ ಬೈಕ್‌ ಕಳ್ಳತನ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಿ ವಿಶೇಷ ತನಿಖಾ ತಂಡ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದಕುಮಾರ ಅವರು ತಿಳಿಸಿದರು.

ವಿಜಯಪುರದ ರಂಗೀನಮಸೀದೆ ಗಲ್ಲಿಯ ನಜೀರ ಸಾಹೇಬಲಾಲ ಜಾತಗಾರ, ಅಭಿನಾಶ ವಜ್ಜಣ್ಣವರ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 3.60 ಮೌಲ್ಯದ ವಿವಿಧ ಕಂಪನಿಗಳ ಬೈಕ್‌ಗಳನ್ನು ಪೊಲೀಸರು ಜಫ್ತು ಮಾಡಿದ್ದಾರೆ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ