ಪ್ರಜ್ವಲ್ ರೇವಣ್ಣ ವಿರುದ್ದ ಜಾರಿಯಾಗುತ್ತಾ ರೆಡ್ ಕಾರ್ನರ್ ನೊಟೀಸ್?

By Suvarna NewsFirst Published May 4, 2024, 11:52 AM IST
Highlights

ಪ್ರಜ್ವಲ್ ರೇವಣ್ಣ ವಿರುದ್ದ ರೆಡ್ ಕಾರ್ನರ್ ನೊಟೀಸ್  ಜಾರಿಯಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಬಂಧನ ಭೀತಿಯಿಂದ ಪ್ರಜ್ವಲ್ ರೇವಣ್ಣ ವಿದೇಶದಿಂದ ವಾಪಸ್ಸು ಬರೋದು ಅನುಮಾನ ಎನ್ನಲಾಗುತ್ತಿದೆ.

ಬೆಂಗಳೂರು (ಮೇ.4): ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಹಲವು ವಿಚಾರಗಳು ಬಯಲಾಗುತ್ತಿದೆ. ಸದ್ಯ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್‌ಐಟಿ ಲುಕ್ ಔಟ್ ನೊಟೀಸ್ ಜಾರಿ ಮಾಡಿದೆ. ಇದೀಗ ಪ್ರಜ್ವಲ್ ರೇವಣ್ಣ ವಿರುದ್ದ ರೆಡ್ ಕಾರ್ನರ್ ನೊಟೀಸ್  ಜಾರಿಯಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

ಈಗಾಗಲೇ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್ ಐ ಟಿ ಲುಕ್ ಔಟ್ ನೊಟೀಸ್ ಜಾರಿ ಮಾಡಿದೆ. ಆದರೆ ಬಂಧನ ಭೀತಿಯಿಂದ ಪ್ರಜ್ವಲ್ ರೇವಣ್ಣ ವಿದೇಶದಿಂದ ವಾಪಸ್ಸು ಬರೋದು ಅನುಮಾನ ಎನ್ನಲಾಗುತ್ತಿದೆ. ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದು, ವೀಸಾ ಆಗತ್ಯತೆ ಬೀಳುವುದಿಲ್ಲ. ಹೀಗಾಗಿ ದೇಶದಿಂದ ದೇಶಕ್ಕೆ ಓಡಾಡಿಕೊಂಡು ಇರಬಹುದು. ಈ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೊಟೀಸ್ ಹೊರಡಿಸುವ ಸಾಧ್ಯತೆ ಇದೆ. 

ರೆಡ್ ಕಾರ್ನರ್ ನೊಟೀಸ್ ಹೊರಡಿಸಲು ಸಿಐಡಿ ಮುಖಾಂತರ ಸಿಬಿಐ ಗೆ ಮನವಿ ಮಾಡಬೇಕು. ಸಿಬಿಐ ಇಂಟರ್ ಪೋಲ್‌ ಮುಖಾಂತರ ರೆಡ್ ಕಾರ್ನರ್ ನೊಟೀಸ್ ಹೊರಡಿಸಬೇಕು. ರೆಡ್ ಕಾರ್ನರ್ ನೊಟೀಸ್ ಜಾರಿಯಾದ್ರೆ ಯಾವ ದೇಶದಲ್ಲಿದ್ದರೂ ಆ ದೇಶದ ಪೊಲೀಸರು ಆರೋಪಿಯನ್ನು ಬಂಧನ ಮಾಡಿ ಸಂಬಂಧಪಟ್ಟ ದೇಶಕ್ಕೆ ಮಾಹಿತಿ ನೀಡುತ್ತದೆ. ಹೀಗಾಗಿ ಪ್ರಜ್ವಲ್ ರೇವಣ್ಣ ವಿರುದ್ದ ರೆಡ್ ಕಾರ್ನರ್ ನೊಟೀಸ್ ಜಾರಿಯಾಗುವ ಸಾಧ್ಯತೆ ಹೆಚ್ಚಿದೆ.

click me!