ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯರಿಗೆ ಕಾನೂನಿನ ನೆರವು, ರಕ್ಷಣೆ ಹಾಗೂ ಇತರೆ ಸಹಾಯಕ್ಕಾಗಿ ಎಸ್‌ಐಟಿ ತಂಡದಿಂದ 6360938947 ಸಹಾಯವಾಣಿ ಆರಂಭಿಸಲಾಗಿದೆ.
ಬೆಂಗಳೂರು (ಮೇ 05): ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆಯರನ್ನು ರಕ್ಷಣೆಗೆ ಮುಂದಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಂತ್ರಸ್ತ ಮಹಿಳೆಯರಿಗೆ ಕಾನೂನಿನ ನೆರವು, ರಕ್ಷಣೆ ಅಥವಾ ಇನ್ನಿತರೆ ಸಹಾಯ ಬೇಕಿದ್ದಲ್ಲಿ ಸಹಾಯವಾಣಿಯನ್ನು ಆರಂಭಿಸಿದೆ.
ಹೌದು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇಡೀ ದೇಶದವನ್ನೇ ಬೆಚ್ಚಿ ಬೀಳಿಸಿದೆ. ಸುಮಾರು 2,900ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹಂಚಿಕೆಯಾಗಿದೆ. ಇದರಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುವ ಸಾಧ್ಯತೆಯಿದೆ. ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ, ಈಕೆ ಪೊಲೀಸರಿಗೆ ದೂರು ಕೊಟ್ಟು ತನ್ನ ಬಂಧನಕ್ಕೆ ಕಾರಣವಾಗಬಹುದು ಎಂದು ಸಂತ್ರಸ್ತ ಮಹಿಳೆಯನ್ನು ಕಿಡ್ನಾಪ್ ಮಾಡಿಸಲಾಗಿತ್ತು. ಆದರೆ, ಅತ್ಯಾಚಾರ ಸಂತ್ರಸ್ತೆಯ ಮಗ ನೀಡಿದ ದೂರಿನ ಅನ್ವಯ ಎಸ್‌ಐಟಿ ಪೊಲೀಸರು ಮಹಿಳೆಯನ್ನು ಹುಡುಕಿ ರಕ್ಷಣೆ ಮಾಡಿದ್ದಾರೆ.
ರಾಜಕೀಯ ಷಡ್ಯಂತ್ರ ಮಾಡಿ ಕಿಡ್ನಾಪ್ ಕೇಸ್ ಹಾಕಿಸಿ ಅರೆಸ್ಟ್ ಮಾಡಿದ್ದಾರೆ; ಮಾಜಿ ಸಚಿವ ಹೆಚ್.ಡಿ. ರೇವಣ್ಣ
ಈಗ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಅತ್ಯಾಚಾರಕ್ಕೆ ಒಳಗಾದ ಮಹಿಳಯರಿಗೆ ರಕ್ಷಣೆ ನೀಡುವುದಕ್ಕೆ ಎಸ್‌ಐಟಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯರಿಗಾಗಿ ಎಸ್‌ಐಟಿ ಸಹಾಯವಾಣಿ ನಂಬರ್ 6360938947 ನೀಡಿದೆ. ವಿಶೇಷ ತನಿಖಾ ತಂಡದಿಂದ ಪ್ರಕಟಣೆ ಮೂಲಕ ಹೆಲ್ಪ್ ಲೈನ್ ಸಂಖ್ಯೆ ಬಿಡುಗಡೆ ಮಾಡಲಾಗಿದೆ. ತನಿಖೆಯ ಸಂದರ್ಭದಲ್ಲಿ ಕಾನೂನಿನ ನೆರವು, ರಕ್ಷಣೆ ಮತ್ತು ಇನ್ನಿತರ ಸಹಾಯ ಬೇಕಾಗಿದ್ದಲ್ಲಿ ಸಹಾಯವಾಣಿಗೆ ಕರೆ ಮಾಡುವಂತೆ ಪ್ರಕಟಣೆ ನೀಡಲಾಗಿದೆ. ಜೊತೆಗೆ, ಸಂತ್ರಸ್ತರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎಸ್‌ಐಟಿ ಭರವಸೆ ನೀಡಿದೆ.