ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ವಿರುದ್ಧ ಪಟ್ಟಣಗೆರೆ ಶೆಡ್‌ನ ಮಣ್ಣೂ ಪ್ರಬಲ ಸಾಕ್ಷ್ಯ..!

By Kannadaprabha News  |  First Published Sep 7, 2024, 5:30 AM IST

ಪಟ್ಟಣಗೆರೆ ಶೆಡ್‌ನ ಮಣ್ಣು ದರ್ಶನ್ ಮತ್ತು ಅವರ ಮೂವರು ಸಹಚರರು ಧರಿಸಿದ್ದ ಶೂಗಳಲ್ಲಿ ಅಂಟಿದ್ದ ಮಣ್ಣಿಗೆ ಹೋಲಿಕೆಯಾಗಿದೆ ಎಂದು ಖಚಿತಪಡಿಸಿದ್ದ ವಿಧಿ ವಿಜ್ಞಾನ ಪ್ರಯೋಗಾಲದ (ಎಫ್ ಎಸ್ಎಲ್) ವರದಿಯನ್ನು ಆರೋಪ ಪಟ್ಟಿಯಲ್ಲಿ ಪೊಲೀಸರು ಲಗತ್ತಿಸಿದ್ದಾರೆ. ಇದು ದರ್ಶನ್ ವಿರುದ್ಧ ಸಂಗ್ರಹವಾಗಿರುವ ವೈಜ್ಞಾನಿಕ ಸಾಕ್ಷ್ಯಗಳಲ್ಲೊಂದಾಗಿದೆ.


ಬೆಂಗಳೂರು(ಸೆ.07):  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ದ ಮೃತನ ರಕ್ತ ಹಾಗೂ ಫೋಟೋಗಳು ಮಾತ್ರವಲ್ಲದೆ ಹತ್ಯೆ ಕೃತ್ಯ ನಡೆದ ಪಟ್ಟಣಗೆರೆ ಶೆಡ್‌ನ ಮಣ್ಣು ಸಹ ಮಹತ್ವದ ವೈಜ್ಞಾನಿಕ ಪುರಾವೆಯಾಗಿದೆ. ಪಟ್ಟಣಗೆರೆ ಶೆಡ್‌ನ ಮಣ್ಣು ದರ್ಶನ್ ಮತ್ತು ಅವರ ಮೂವರು ಸಹಚರರು ಧರಿಸಿದ್ದ ಶೂಗಳಲ್ಲಿ ಅಂಟಿದ್ದ ಮಣ್ಣಿಗೆ ಹೋಲಿಕೆಯಾಗಿದೆ ಎಂದು ಖಚಿತಪಡಿಸಿದ್ದ ವಿಧಿ ವಿಜ್ಞಾನ ಪ್ರಯೋಗಾಲದ (ಎಫ್ ಎಸ್ಎಲ್) ವರದಿಯನ್ನು ಆರೋಪ ಪಟ್ಟಿಯಲ್ಲಿ ಪೊಲೀಸರು ಲಗತ್ತಿಸಿದ್ದಾರೆ. ಇದು ದರ್ಶನ್ ವಿರುದ್ಧ ಸಂಗ್ರಹವಾಗಿರುವ ವೈಜ್ಞಾನಿಕ ಸಾಕ್ಷ್ಯಗಳಲ್ಲೊಂದಾಗಿದೆ.

ಈ ಹತ್ಯೆ ಕೃತ್ಯದ ರುಜುವಾತಿಗೆ ಪ್ರತ್ಯಕ್ಷ, ಸಾಂದರ್ಭಿಕ ಹಾಗೂ ವೈದ್ಯಕೀಯ ಪುರಾವೆಗಳಿಗೆ ಕೊಟ್ಟಷ್ಟೇ ಪ್ರಾಮುಖ್ಯತೆಯನ್ನು ವೈಜ್ಞಾನಿಕಸಾಕ್ಷ್ಯಗಳಿಗನೀಡಿರುವಪೊಲೀಸರು, ಪ್ರತಿ ಹಂತದಲ್ಲೂ ಸಣ್ಣ ಕುರುಹನ್ನೂ ಉಪೇಕ್ಷಿಸದೆ ತನಿಖೆ ನಡೆಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ವೇಳೆ ಧರಿಸಿದರು ಎಂಬ ಶಂಕೆ ಮೇರೆಗೆ ದರ್ಶನ್ ಗ್ರಾಂಗ್‌ನಿಂದ ತೂ ಹಾಗೂ ಚಪಲಿಗಳನ್ನು ಪೊಲೀಸರು ಜಪ್ತಿ ಮಾಡಿದ್ದರು. ಅವುಗಳಲ್ಲಿ ಅಂಟಿದ್ದ ಮಣ್ಣಿನ ತುಣುಕುಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಪೊಲೀಸರು ಕಳುಹಿಸಿದ್ದರು. ಹತ್ಯೆ ಕೃತ್ಯ ನಡೆದ ಪಟ್ಟಣಗೆರೆ ಶೆಡ್‌ನ ಮಣ್ಣು ಹಾಗೂ ಆರೋಪಿಗಳ ಪಾದರಕ್ಷೆಗಳಿಗೆ ಅಂಟಿರುವ ಮಣ್ಣಿಗೂ ಸಾಮ್ಯತೆ ಬಗ್ಗೆ ಪರೀಕ್ಷಿಸಿ ವರದಿ ನೀಡುವಂತೆ ಎಫ್‌ಎಸ್‌ಎಲ್ ತಜ್ಞರಿಗೆ ಪೊಲೀಸರು ಕೋರಿದ್ದರು. ಅಂತೆಯೇ ಪರೀಕ್ಷೆ ನಡೆಸಿ ಎಫ್ಎಸ್‌ಎಲ್ ವರದಿ ನೀಡಿದ್ದು, ಕೊಲೆ ಪ್ರಕರಣದ 17 ಆರೋಪಿಗಳ ಪೈಕಿ ದರ್ಶನ್, ಅವರ ಮನೆ ಕೆಲಸಗಾರ ನಂದೀಶ್, ವ್ಯವಸ್ಥಾಪಕ ನಾಗರಾಜ್ ಅವರು ಧರಿಸಿದ್ದ ತೂಗಳು ಮತ್ತು ಚಿತ್ರದುರ್ಗ ಜಿಲ್ಲೆಯ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರನ ಚಪ್ಪಲಿಯಲ್ಲಿದ್ದ ಮಣ್ಣಿಗೆ ಹೋಲಿಕೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಿದ್ದ ಆರೋಪ ಪಟ್ಟಿಯಲ್ಲಿ ಎಫ್‌ಎಸ್‌ಎಲ್ ವರದಿಯನ್ನು: ವರದಿಯನ್ನು ಪೊಲೀಸರು ಲಗತ್ತಿಸಿದ್ದಾರೆ.

Tap to resize

Latest Videos

ಕಾಂಗ್ರೆಸ್ ಸರ್ಕಾರ ಬೇಕಂತಲೇ ದರ್ಶನ್ ಕೊಲೆ ಕೇಸಿನ ಫೋಟೋ ರಿಲೀಸ್ ಮಾಡ್ತಿದೆ; ಕೇಂದ್ರ ಸಚಿವ ಜೋಶಿ

ವಿಜಯಲಕ್ಷ್ಮಿ ಮನೆಗೆ ಶೂ ಸಾಗಿಸಿದ್ದ 

ದರ್ಶನ್ ರೇಣುಕಾಸ್ವಾಮಿ ಹತ್ಯೆ ಬಳಿಕ ತಾವು ಧರಿಸಿದ್ದ ಶೂಗ ಳನ್ನು ಹೊಸಕೆರೆಹಳ್ಳಿ ಸಮೀಪದ ಅಪಾರ್ಟ್‌ಮೆಂಟ್ ನಲ್ಲಿ ನೆಲೆಸಿದ್ದ ತಮ್ಮ ಪತ್ನಿ ವಿಜಯಲಕ್ಷ್ಮಿ ಅವರ ಫ್ಯಾಟ್‌ಗೆ ದರ್ಶನ್ ಕಳುಹಿಸಿದ್ದರು. ಬಳಿಕ ಅವರ ಪತ್ನಿ ಪತ್ನಿ ಮನೆಯಿಂದಲೇ ಆ ಶೂಗಳನ್ನು ಪೊಲೀಸರು ಜಪ್ತಿ ಮಾಡಿದ್ದರು. ಅಲ್ಲದೆ ಈ ಬಗ್ಗೆ ವಿಜಯಲಕ್ಷ್ಮೀ ಅವರನ್ನು ವಿಚಾರಣೆಗೊಳಪಡಿಸಿದ್ದರು.

ಬಳ್ಳಾರಿ ಸೆಲ್‌ನಲ್ಲಿ ದರ್ಶನ್‌ಗೆ ಟೀವಿ ವ್ಯವಸ್ಥೆ 

ಬಳ್ಳಾರಿ: ದರ್ಶನ್ ಬೇಡಿಕೆಯಂತೆ ಹೈ-ಸೆಕ್ಯೂರಿಟಿ ಸೆಲ್‌ನಲ್ಲಿ ಟೀವಿ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಟೀವಿ ಹಳೆಯದಾಗಿದ್ದರಿಂದ ರಿಪೇರಿಗೆ ಬಂದಿತ್ತು. ಮತ್ತೆ ದುರಸ್ತಿಗೊಳಿಸಿ ಸೆಲ್‌ನಲ್ಲಿ ಟಿವಿ ಅಳವಡಿಸಲಾಗಿದೆ. ದರ್ಶನ್ ಸೆರೆವಾಸ ಹಿನ್ನೆಲೆಯಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುತ್ತಿದೆ. ಜೈಲಿನ ಮುಂಭಾಗದ ಗೇಟ್ ಬಳಿ ದುರಸ್ತಿಯಲ್ಲಿದ್ದ ಸಿಸಿ ಕ್ಯಾಮೆರಾವನ್ನು ತೆರವುಗೊಳಿಸಿ, ಶುಕ್ರವಾರ ಪುನಃ ಹೊಸ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಈ ಮಧ್ಯೆ, ಆಂತರಿಕ ಭದ್ರತೆ ವಿಭಾಗದ ಐಜಿ ತ್ಯಾಗರಾಜನ್ ಅವರು ಶುಕ್ರವಾರ ಜೈಲಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

click me!