Soladevanahalli Assault Case: ಸೋಲದೇವನಹಳ್ಳಿ ಹಲ್ಲೆ ಕೇಸ್‌, ಬೇಲ್‌ ಸಿಕ್ಕರೂ ಪುಂಡರಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಕಾಲೇಜ್

Kannadaprabha News, Ravi Janekal |   | Kannada Prabha
Published : Jul 10, 2025, 06:08 AM ISTUpdated : Jul 10, 2025, 10:42 AM IST
Soladevanahalli case

ಸಾರಾಂಶ

ಸೋಲದೇವನಹಳ್ಳಿಯಲ್ಲಿ ಯುವಕನನ್ನು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ ಪ್ರಕರಣದ ಆರೋಪಿಗಳಿಗೆ ಪರೀಕ್ಷೆ ಬರೆಯಲು ಕಾಲೇಜು ಆಡಳಿತ ಮಂಡಳಿ ಅವಕಾಶ ನಿರಾಕರಿಸಿದೆ. ಜಾಮೀನು ಪಡೆದಿದ್ದರೂ ಹಾಜರಾತಿ ಕೊರತೆಯಿಂದಾಗಿ ಪರೀಕ್ಷೆಗೆ ಅನರ್ಹರೆಂದು ಘೋಷಿಸಲಾಗಿದೆ

ಪೀಣ್ಯ ದಾಸರಹಳ್ಳಿ (ಜುಲೈ.10): ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಯುವಕನನ್ನು ಕಿಡ್ನಾಪ್ ಮಾಡಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಪರೀಕ್ಷೆಯ ಕಾರಣ ಕೋರ್ಟ್‌ ಜಾಮೀನು ನೀಡಿದ್ದರೂ ಕಾಲೇಜ್ ಆಡಳಿತ ಮಂಡಳಿ ಪರೀಕ್ಷೆಗೆ ಹಾಜರಾಗಲು ನಿರಾಕರಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ನಟ ದರ್ಶನ ಗ್ಯಾಂಗ್‌ ರೀತಿ ಕುಶಾಲ್ ಎನ್ನುವ ಯುವಕನನ್ನು ಕಿಡ್ನಾಪ್ ಮಾಡಿದ್ದ ಸೋಲದೇವನಹಳ್ಳಿ ಪುಂಡರು, ಆತನ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ವಿದ್ಯಾರ್ಥಿಗಳಾದ 8 ಆರೋಪಿಗಳು ಪರೀಕ್ಷೆಯ ನೆಪ ಹೇಳಿ ಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ. ಆದರೆ, ಪರೀಕ್ಷೆ ಬರೆಯೋದಕ್ಕೆ ಆರೋಪಿಗಳಿಗೆ ಕಾಲೇಜು ಆಡಳಿತ ಮಂಡಳಿ ಅನುಮತಿಯೇ ಕೊಟ್ಟಿಲ್ಲ.

ಪುಂಡ ವಿದ್ಯಾರ್ಥಿಗಳು ಸರಿಯಾಗಿ ಕಾಲೇಜ್‌ಗೆ ಹೋಗದ್ದರಿಂದ ಹಾಜರಾತಿ ಕೊರತೆ ಇದೆ. ಈ ಕಾರಣದಿಂದ ಪರೀಕ್ಷೆ ಬರೆಯಲು ಹಾಲ್‌ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ, ಮಧ್ಯಂತರ ಜಾಮೀನು ವಜಾಗೊಳಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಪರೀಕ್ಷೆಗೆ ಅರ್ಹತೆ ಇಲ್ಲದೆ ಇದ್ದರೂ ಸುಳ್ಳು ಹೇಳಿ ಆರೋಪಿಗಳು ಜಾಮೀನು ಪಡೆದಿದ್ದಾರೆ ಎಂದು ಪೊಲೀಸರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಎ1 ಆರೋಪಿ ಬಂಧನ:

ಎಫ್‌ಐಆರ್ ಆಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಪ್ರಕರಣದ ಎ1 ಆರೋಪಿ ಹೇಮಂತ್‌ನನ್ನ ತುಮಕೂರಿನಲ್ಲಿ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕುಶಾಲ್ ಅಪಹರಣಕ್ಕೆ ಈತನೇ ಪ್ಲ್ಯಾನ್‌ ಮಾಡಿದ್ದ. ಈತನ ವಿರುದ್ಧ ಈ ಹಿಂದೆಯೂ ಹಲ್ಲೆ ಆರೋಪದ ಮೇಲೆ 3 ಎಫ್‌ಐಆರ್ ದಾಖಲಾಗಿವೆ. 2023ರಲ್ಲಿ 1 ಹಾಗೂ 2024ರಲ್ಲಿ 2 ಕೇಸ್ ದಾಖಲಾಗಿದ್ದು, ಇದು ಸೇರಿ 4 ಕೇಸ್‌ನಲ್ಲಿ ಭಾಗಿಯಾಗಿದ್ದಾನೆ ಎಂದು ಪೋಲಿಸ್ ಅಧಿಕಾರಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!