
ಛಿಂದ್ವಾಡಾ(ಮ.ಪ್ರ)(ಮೇ.30): ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ ವ್ಯಕ್ತಿಯೊಬ್ಬ ತನ್ನ ಕೂಡು ಕುಟುಂಬದ ಎಂಟು ಮಂದಿಯನ್ನು ಕೊಡಲಿಯಿಂದ ಹತ್ಯೆಗೈದು ಬಳೀಕ ತಾನೂ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಮಧ್ಯಪ್ರದೇಶದ ಛಿಂದ್ವಾಡದ ಬೋದಲ್ ಕಚ್ಚರ್ ಗ್ರಾಮದಲ್ಲಿ ನಡೆದಿದೆ.
ಬುಧವಾರ ಮುಂಜಾನೆ 2:30ಕ್ಕೆ ದಿನೇಶ್ ಸರಿಯಾಮ್ ಎಂಬ ವ್ಯಕ್ತಿ ತನ್ನ ಪತ್ನಿ, ತಾಯಿ, ಸೋದರರು, ಅತ್ತಿಗೆ ಮತ್ತು ಮೂರು ಮಕ್ಕಳನ್ನು ಕೊಡಲಿಯಿಂದ ಹತ್ಯೆಗೈದಿದ್ದಾನೆ. ಬಳಿಕ ಸೋದರಳಿಯನನ್ನು ಹತ್ಯೆ ಮಾಡುವಾಗ ಆತ ತಪ್ಪಿಸಿಕೊಂಡು ಓಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಂತರ ಕೊಲೆ ಮಾಡಿದ ವ್ಯಕ್ತಿಯ ಹತ್ತಿರದಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಡೆತ್‌ನೋಟಲ್ಲಿ ಹೆಸರಿದ್ದಾಕ್ಷಣ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದಂತಲ್ಲ- ಹೈಕೋರ್ಟ್
ದಿನೇಶ್ ಸರಿಯಾಮ್ ಮೇ 21ರಂದು ವಿವಾಹವಾಗಿದ್ದು, ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಈ ರೀತಿ ಕೃತ್ಯ ಎಸಗಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ