ವಾಕಿಂಗ್ ಹೋಗ್ತಿದ್ದೋರ ಮೇಲೆ ಹರಿದ ಕಾರು: ತಾಯಿ - ಮಗು ಸೇರಿ ಮೂವರ ಬಲಿ; ಸಿಸಿ ಕ್ಯಾಮರಾದಲ್ಲಿ ಆಘಾತಕಾರಿ ದೃಶ್ಯ ಸೆರೆ

Published : Jul 05, 2023, 01:22 PM IST
ವಾಕಿಂಗ್ ಹೋಗ್ತಿದ್ದೋರ ಮೇಲೆ ಹರಿದ ಕಾರು: ತಾಯಿ - ಮಗು ಸೇರಿ ಮೂವರ ಬಲಿ; ಸಿಸಿ ಕ್ಯಾಮರಾದಲ್ಲಿ ಆಘಾತಕಾರಿ ದೃಶ್ಯ ಸೆರೆ

ಸಾರಾಂಶ

ತಿರುವಿನಲ್ಲಿ ಚಲಿಸುವಾಗ, ಕಾರು ನಿಯಂತ್ರಣವನ್ನು ಕಳೆದುಕೊಂಡಿದ್ದು, ರಸ್ತೆಯ ಉದ್ದಕ್ಕೂ ಸ್ಕಿಡ್ ಆಗುತ್ತದೆ ಮತ್ತು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂವರ ಮೇಲೆ ಡಿಕ್ಕಿ ಹೊಡೆದು ಬಲಿ ತೆಗೆದುಕೊಂಡಿದೆ. 

ಹೈದರಾಬಾದ್‌ (ಜುಲೈ 5, 2023): ತೆಲಂಗಾಣದ ಹೈದರಾಬಾದ್‌ನಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. 
ಹೈದರಾಬಾದ್‌ನ ಹೈದರ್‌ಶಕೋಟೆ ಮುಖ್ಯರಸ್ತೆಯಲ್ಲಿ ಮೂವರು ಬೆಳಗಿನ ವಾಕ್‌ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಣ್ಗಾವಲು ಕ್ಯಾಮೆರಾಗಳು ಅಪಘಾತದ ದೃಶ್ಯಗಳನ್ನು ಸೆರೆಹಿಡಿದಿದ್ದು, ಅಪಘಾತದ ಸಮಯದಲ್ಲಿ ಕಾರು ಹೆಚ್ಚಿನ ವೇಗದಲ್ಲಿತ್ತು ಎಂದೂ ತೋರಿಸಿದೆ.

ಸಿಸಿ ಕ್ಯಾಮರಾ ದೃಶ್ಯಗಳು ರಸ್ತೆಯ ಉದ್ದಕ್ಕೂ ವೇಗವಾಗಿ ಬರುತ್ತಿರುವ ಕೆಂಪು ಕಾರು ತೋರಿಸುತ್ತವೆ. ಬಳಿಕ ತಿರುವಿನಲ್ಲಿ ಚಲಿಸುವಾಗ, ಕಾರು ನಿಯಂತ್ರಣವನ್ನು ಕಳೆದುಕೊಂಡಿದ್ದು, ರಸ್ತೆಯ ಉದ್ದಕ್ಕೂ ಸ್ಕಿಡ್ ಆಗುತ್ತದೆ ಮತ್ತು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂವರಿಗೆ ಹಿಂಸಾತ್ಮಕವಾಗಿ ಡಿಕ್ಕಿ ಹೊಡೆಯುತ್ತದೆ. ನಂತರದ ದೃಶ್ಯಗಳು ರಸ್ತೆಯ ಪಕ್ಕದಲ್ಲಿರುವ ಮರಗಳ ಗುಂಪಿನ ಬಳಿ ಕಾರು ಹೋಗುತ್ತದೆ ಎಂದು ತೋರಿಸುತ್ತದೆ. 

ಇದನ್ನು ಓದಿ: Breaking: ಮಹಾರಾಷ್ಟ್ರದಲ್ಲಿ ಮತ್ತೊಂದು ಭೀಕರ ಅಪಘಾತ: ಯಮ ಸ್ವರೂಪಿ ಟ್ರಕ್‌ಗೆ 15 ಮಂದಿ ಬಲಿ, 20ಕ್ಕೂ ಹೆಚ್ಚು ಜನರಿಗೆ ಗಾಯ

ಈ ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಸಾವಿಗೀಡಾದವರಲ್ಲಿ ತಾಯಿ ಮತ್ತು ಮಗು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು, ಈ ಘಟನೆ ಸಂಬಂಧ ನರಸಣಿಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಬೆಳಗ್ಗೆ ವಾಕಿಂಗ್ ಹೋಗಿದ್ದವರು ಈ ರೀತಿ ರಸ್ತೆಯಲ್ಲೇ ಶವವಾಗಿರುವ ದಾರುಣ ಘಟನೆ ವರದಿಯಾಗಿದೆ. ಮೃತರೆಲ್ಲ ಶಾಂತಿ ನಗರ ಕಾಲೋನಿಯವರು ಎಂದೂ ತಿಳಿದುಬಂದಿದೆ. 

ಇನ್ನೊಂದೆಡೆ, ಈ ಹಿಂದೆ ಮೇ ತಿಂಗಳಲ್ಲಿ ಹೈದರಾಬಾದ್‌ನಲ್ಲಿ ಇದೇ ರೀತಿಯ ಅಜಾಗರೂಕತೆಯ ಚಾಲನೆ ಪ್ರಕರಣ ನಡೆದಿತ್ತು. ಹೈದರಾಬಾದ್‌ ಹೊರವಲಯದ ಖಾನಾಪುರ ಕ್ರಾಸ್‌ರೋಡ್ ಬಳಿ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದರು. ಬೆಳಗ್ಗೆ 10 ಗಂಟೆ ಸುಮಾರಿಗೆ ಕಾರಿನಲ್ಲಿದ್ದವರು ನಿಜಾಂಪೇಟೆಯಿಂದ ಓಷನ್ ಪಾರ್ಕ್‌ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ರಾಜೇಂದ್ರನಗರ ಡಿಸಿಪಿ ಜಗದೀಶ್ವರ್ ರೆಡ್ಡಿ ಅವರು ಹೇಳಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಬಸ್‌ ದುರಂತಕ್ಕೆ ‘ರೋಡ್‌ ಹಿಪ್ನೋಸಿಸ್‌’ ಕಾರಣ: 25 ಜನರ ಜೀವವನ್ನೇ ತೆಗೆದ ಈ ಸಮಸ್ಯೆ!

ಅಪಘಾತದ ನಂತರ ಮೃತದೇಹಗಳನ್ನು ಪೊಲೀಸ್ ತಂಡ ಹೊರತೆಗೆದಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದೂ ವರದಿಯಾಗಿತ್ತು. 

ಮಹಾರಾಷ್ಟ್ರದಲ್ಲೂ ಒಂದು ವಾರದಲ್ಲಿ 2 ಭೀಕರ ಅಪಘಾತಗಳಿಗೆ ಸುಮಾರು 40 ಬಲಿ!
ಈ ಮಧ್ಯೆ ಮಹಾರಾಷ್ಟ್ರದಲ್ಲಿ ಭೀಕರ ಅಪಘಾತಕ್ಕೆ ಕನಿಷ್ಠ 15 ಜೀವಗಳು ಬಲಿಯಾಗಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಧುಲೆ ಜಿಲ್ಲೆಯ ಶಿರ್ಪುರ ತಾಲೂಕಿನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಕಂಟೇನರ್‌ ಟ್ರಕ್‌ ಅನೇಕ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭೀಕರ ಬಸ್‌ ಅಪಘಾತ: ಸವಿನಿದ್ರೆಯಲ್ಲಿದ್ದ 25 ಮಂದಿ ಸಜೀವ ದಹನ

ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಂಟೇನರ್‌ ಟ್ರಕ್‌ವೊಂದು 4 ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿ ಬಳಿಕ, ಹೆದ್ದಾರಿಯಲ್ಲಿದ್ದ ಹೋಟೆಲ್‌ಗೆ ಡಿಕ್ಕಿ ಹೊಡೆದಿದೆ ಎಂದು ಮಹಾರಾಷ್ಟ್ರ ಹೆದ್ದಾರಿ ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರ ಗುರುತು ಇನ್ನೂ ಅಧಿಕೃತವಾಗಿ ಬಿಡುಗಡೆಯಾಗಬೇಕಿದ್ದು, ಈ ಅಪಘಾತಕ್ಕೆ ಸಂಬಂಧಪಟ್ಟಂತೆ ತನಿಖೆ ಮುಂದುವರಿದಿದೆ ಎಂದೂ ವರದಿಯಾಗಿದೆ. 

ಅದಕ್ಕೂ ಮುನ್ನ, ಮಹಾರಾಷ್ಟ್ರದಲ್ಲಿ ಶನಿವಾರ ನಸುಕಿನ ಜಾವ ಭೀಕರ ಅಪಘಾತವಾಗಿತ್ತು. ಸವಿನಿದ್ರೆಯಲ್ಲಿದ್ದ 25 ಮಂದಿ ಚಿರನಿದ್ರೆಗೆ ಜಾರಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. 32 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 25 ಜನರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ನಸುಕಿನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಸುಮಾರು 8 ಜನ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದೂ ತಿಳಿದುಬಂದಿದೆ.

ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಸಿಬ್ಬಂದಿ ಕಾರಣ: ರೈಲ್ವೆ ತನಿಖಾ ವರದಿ; ವಿಧ್ವಂಸಕ ಕೃತ್ಯದ ಅನುಮಾನದ ಬಗ್ಗೆ ಸಿಬಿಐ ತನಿಖೆ ಮುಂದುವರಿಕೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!