ಪರೀಕ್ಷೆ ಕೆಲವೇ ದಿನಗಳಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ

By Suvarna News  |  First Published Jun 16, 2020, 9:53 PM IST

ಪರೀಕ್ಷೆ ಕೆಲವೇ ದಿನಗಳು ಬಾಕಿ ಇರುವಾಗಲೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 


ಹುಬ್ಬಳ್ಳಿ, (ಜೂನ್.16): ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಸದಾಶಿವನಗರದಲ್ಲಿ ನಡೆದಿದೆ.

ಜ್ಯೋತಿ ರುದ್ರಪ್ಪ ಉಪ್ಪಾರ (16) ಮೃತ ವಿದ್ಯಾರ್ಥಿನಿ. ಜ್ಯೋತಿ  ಜೂ.25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿತ್ತು. ಆದ್ರೆ, ಇಂದು (ಮಂಗಳವಾರ) ಮನೆಯಲ್ಲಿ ಯಾರೂ ಇಲ್ಲದ ವೇಳೆ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Tap to resize

Latest Videos

ಇಬ್ಬರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರಿಗೆ ಸೋಂಕು, ಬೆಂಗಳೂರಿನ ಮೂಲೆ-ಮೂಲೆಗೂ ಕೊರೋನಾ!

ಇನ್ನು ಜ್ಯೋತಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪರೀಕ್ಷೆಗೆ ಓದಿಲ್ಲದ ಕಾರಣ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

click me!